
ಶಿವಮೊಗ್ಗ: ಬಿಜೆಪಿಯಿಂದ ಪರಿಷತ್ ಸದಸ್ಯನಾಗಿ ಆಯ್ಕೆಯಾಗಿ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಬಿಜೆಪಿ ತೊರೆದು ಪರಿಷತ್ ಸದಸ್ಯ ಸ್ಥಾನಕ್ಕೆ ರಾಜಿನಾಮೆ ಕೊಟ್ಟು ತೆನೆ ಹೊತ್ತು ಜನತಾದಳದಿಂದ ಶಿವಮೊಗ್ಗ ನಗರ ವಿಧಾನ ಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಿ ಪರಾಭವಗೊಂಡಿದ್ದರು.
ನಂತರದ ದಿನಗಳಲ್ಲಿ ಆಯನೂರು ಮಂಜುನಾಥ್ ಕಾಂಗ್ರೆಸ್ ಸೇರುತ್ತಾರೆ ಎಂಬ ಸುದ್ದಿಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬರಲು ಖುದ್ದು ಆಯನೂರು ಮಂಜುನಾಥ್ ಶಿವಮೊಗ್ಗದಲ್ಲಿ ಮಾಧ್ಯಮಗಳ ಮುಂದೆ ಬಂದು ಆಗಸ್ಟ್ 24ರಂದು ಕಾಂಗ್ರೆಸ್ ಸೇರುವುದಾಗಿ ಹೇಳುವ ಮೂಲಕ ಊಹಾಪೋಹಗಳಿಗೆ ತೆರೆ ಎಳೆದರು.

ಆ.24ರಂದು ಬೆಂಗಳೂರಿನ ಕೆಪಿಸಿಸಿ ಕಛೇರಿಯಲ್ಲಿ ರಾಜ್ಯಾಧ್ಯಕ್ಷರಾದ ಡಿ.ಕೆ ಶಿವಕುಮಾರ್ ಆಯನೂರು ಮಂಜುನಾಥ್ ಹತ್ತಿರುವ ಕೊನೆ ಬಸ್ ಇದು ಎಂದು ಹೇಳುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು ಈ ಕ್ಷಣಕ್ಕೆ ಜಿಲ್ಲಾ ಉಸ್ತುವಾರಿ ಮಂತ್ರಿಗಳಾದ ಮಧು ಬಂಗಾರಪ್ಪ, ಶಾಸಕ ಬೇಳೂರು ಗೋಪಾಲಕೃಷ್ಣ, ಜಿಲ್ಲಾಧ್ಯಕ್ಷರಾದ ಹೆಚ್.ಎಸ್ ಸುಂದರೇಶ್, ಮುಖಂಡರಾದ ಮಂಜುನಾಥ್ ಗೌಡ ಹಾಗು ಕಾರ್ಯಕರ್ತರು ಸಾಕ್ಷಿಯಾದರು.
5ರೂಪಾಯಿ ಕೊಟ್ಟು ಕಾಂಗ್ರೆಸ್ ಸದಸ್ಯ ಸ್ಥಾನ ಪಡೆದರು.

ಇಂದು ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಆಯನೂರು ಮಂಜುನಾಥ್ ಪ್ರಾಥಮಿಕ ಸದಸ್ಯ ಸ್ಥಾನ ಪಡೆಯಲು ಆಗಮಿಸಿದ್ದರು. ಜಿಲ್ಲಾಧ್ಯಕ್ಷ ಹೆಚ್.ಎಸ್ ಸುಂದರೇಶ್ ಸದಸ್ಯ ಸ್ಥಾನದ ಅರ್ಜಿಗೆ ಸಹಿ ಹಾಕಿಸಿಕೊಂಡು ಪಕ್ಷದ ಶಾಲನ್ನು ಹಾಕಿ ಪಕ್ಷಕ್ಕೆ ಬರಮಾಡಿಕೊಂಡರು.
ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಆಯನೂರು ಮಂಜುನಾಥ್ ಬೆಂಗಳೂರಿನಲ್ಲಿ ಡಿಸಿಎಮ್ ಡಿ.ಕೆ ಶಿವಕುಮಾರ್ ಹಾಗು ಜಿಲ್ಲಾ ಮಂತ್ರಿಗಳು ಶಾಸಕರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಸೇರಿದ್ದೇನೆ. ನನ್ನ ಜೊತೆ 25ಜನ ಸ್ನೇಹಿತರು, ಹಾಲಿ ಹಾಗು ಮಾಜಿ ಪಾಲಿಕೆ ಸದಸ್ಯರು ಪಕ್ಷಕ್ಕೆ ಸೇರಿದ್ದಾರೆ. ನನಗೆ ಇದು ಹಳೇ ಹಾದಿ ಹೊಸ ಪಯಣ ಇದ್ದಂತೆ ಇಂದಿನಿಂದ ನಾನು ನಿಮ್ಮವನು(ಕಾಂಗ್ರೆಸ್) ನಿಮ್ಮನ್ನು ಪ್ರೀತಿಸುತ್ತೇನೆ. ನನ್ನ ಜವಾಬ್ದಾರಿ ಏನು ಎಂಬುದು ಪಕ್ಷ ತೀರ್ಮಾನಿಸುತ್ತದೆ. ಕಾಂಗ್ರೆಸ್ ಪಕ್ಷವನ್ನು ಸದೃಡವನ್ನಾಗಿಸಿ ಮುಂಬರುವ ಎಲ್ಲಾ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿ ಕಾರ್ಮಿಕರ, ಬಡವರ, ಶೋಷಿತರ ಪರವಾಗಿ ಕೆಲಸ ಮಾಡುತ್ತೇನೆ ಎಂದರು.
ವರದಿ- ವಿನಯ್ ಕುಮಾರ್ ಹೆಚ್.ಎಮ್