
ಶಿವಮೊಗ್ಗ : ಕಾಂಗ್ರೆಸ್ ಪಕ್ಷದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಲಕ್ಷ್ಮಿ ಯೋಜನೆಯನ್ನು ರಾಜ್ಯ ಸರ್ಕಾರ ನಾಳೆ ಅನುಷ್ಠಾನಕ್ಕೆ ತರಲಿದೆ.
ರಾಹುಲ್ ಗಾಂಧಿಯವರ ಸಮ್ಮುಖದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಡಿಸಿಎಮ್ ಡಿ.ಕೆ ಶಿವಕುಮಾರ್ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಗೃಹ ಲಕ್ಷ್ಮಿ ಯೋಜನೆಗೆ ಮೈಸೂರಿನಲ್ಲಿ ಚಾಲನೆ ನೀಡಲಿದ್ದಾರೆ.
ಈ ಕುರಿತಂತೆ ಜಿಲ್ಲಾ ಕಾಂಗಯ ಕಛೇರಿಯಲ್ಲಿ ಮಾಧ್ಯಮಗಳ ಮಾತನಾಡಿದ ಪಾಲಿಕೆ ಸದಸ್ಯ ಹೆಚ್.ಸಿ ಯೋಗೀಶ್ ರವರು ನಾಳೆ ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತದಿಂದ ಗೃಹಲಕ್ಷ್ಮಿ ಯೋಜನೆ ಅನುಷ್ಠಾನ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು ಜಿಲ್ಲಾ ಉಸ್ತುವಾರಿ ಮಂತ್ರಿಗಳಾದ ಮಧು ಬಂಗಾರಪ್ಪರವರು ಕಾರ್ಯಕ್ರಮ ನೆರವೇರಿಸಿಕೊಡಲಿದ್ದಾರೆ.
ಕಾರ್ಯಕ್ರಮದಲ್ಲಿ ನಗರದ ಶಾಸಕರು ಜನ ಪ್ರತಿನಿಧಿಗಳು ಉಪಸ್ಥಿತಿ ಇರುತ್ತದೆ.
92.75 ಕೋಟಿಯಷ್ಟು ಹಣ ನಾಳೆ ಫಲಾನುಭವಿಗಳ ಖಾತೆಗೆ ನೇರ ವರ್ಗಾವಣೆಯಾಗಲಿದೆ
ಕಾಂಗ್ರೆಸ್ ಪಕ್ಷದ ಜಾರಿಗೊಳಿಸಲಾಗಿರುವ ಗ್ಯಾರಂಟಿ ಯೋಜನೆಗಳಲ್ಲಿ ಪ್ರಮುಖ ಯೋಜನೆ ಈ ಗೃಹ ಲಕ್ಷ್ಮಿ ಯೋಜನೆ ಆರಂಭದಲ್ಲಿ ಈ ಯೋಜನೆ ಜಾರಿಗೆ ತರಲು ಆಗುವುದಿಲ್ಲ ಎಂಬ ಮಾತುಗಳು ಕೇಳಿ ಬರುತ್ತಿದ್ದವು ಆದರೆ ಮುಖ್ಯಮಂತ್ರಿ ಸಿದ್ಧರಾಮಯ್ಯರವರು ಎಲ್ಲಾ ಯೋಜನೆಗಳನ್ನು ಜಾರಿಗೆ ತಂದು ನುಡಿದಂತೆ ನಡೆವ ಸರ್ಕಾರ ಎಂದು ಸಾಬೀತು ಮಾಡಿದ್ದಾರೆ.
ನಗರದ ಎಲ್ಲಾ ವಾರ್ಡ್ ಗಳ ಸರ್ಕಾರಿ ಶಾಲೆಗಳು ಹಾಗು ಸಮುದಾಯ ಭವನದಲ್ಲಿ ಮೈಸೂರಿನಲ್ಲಿ ನಡೆಯುವ ಕಾರ್ಯಕ್ರಮವನ್ನು ನೇರವಾಗಿ ವೀಕ್ಷಿಸುವ ಅವಕಾಶ ಕಲ್ಪಿಸಲಾಗಿದೆ.
ನಾಳೆ ಅಂಬೇಡ್ಕರ್ ಭವನದಲ್ಲಿನಡೆಯುವ ಕಾರ್ಯಕ್ರಮಕ್ಕೆ 5ಸಾವಿರ ಜನ ಸೇರುವ ನಿರೀಕ್ಷೆ ಇದೆ.
ಇನ್ನೂ ಹಲವಾರು ಮಹಿಳೆಯರು ಯೋಜನೆಯ ವ್ಯಾಪ್ತಿಗೆ ಬಂದಿಲ್ಲ ಗೃಹ ಲಕ್ಷ್ಮಿ ಯೋಜನೆಗೆ ನಿರ್ದಿಷ್ಟ ಕಾಲಮಾನ ಇರುವುದಿಲ್ಲ ಯಾವಾಗ ಬೇಕಾದರೂ ಅರ್ಜಿ ಸಲ್ಲಿಸಿ ಫಲಾನುಭವಿಗಳಾಗಬಹುದು.
ಅಶಕ್ತ ಮಹಿಳೆಯರಿಗೆ ಸಹಾಯ ಮಾಡಲು 200ಜನರ ಪ್ರಜಾಪ್ರತಿನಿಧಿ ಹೆಸರಿನ ಸ್ವಯಂ ಸೇವಕರು ತಯಾರಿದ್ದಾರೆ ಇವರ ಸಂಪರ್ಕ ಸಂಖ್ಯೆಯನ್ನು ನಾಳೆ ಸಾರ್ವಜನಿಕರಿಗೆ ನೀಡಲಾಗುವುದು ಎಂದರು.
ವರದಿ – ವಿನಯ್ ಕುಮಾರ್ ಹೆಚ್.ಎಮ್