
ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮೇಲಿನ ಕುರುವಳ್ಳಿ ಯಲ್ಲಿ ಇಂದು ಕರ್ನಾಟಕ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳೊಂದಾದ ಗೃಹ ಲಕ್ಷ್ಮಿ ಯೋಜನೆಗೆ ಅಧಿಕೃತವಾಗಿ ಚಾಲನೆ ದೊರಕಿದ್ದು,
ಈ ಕಾರ್ಯಕ್ರಮದ ನೇರ ಪ್ರಸಾರವು ಮೇಲಿನ ಕುರುವಳ್ಳಿ ಗ್ರಾಮ ಪಂಚಾಯಿತಿಯ ಕಾರ್ಯಾಲಯದಲ್ಲಿ ಎಲ್ಇಡಿ ಪರದೆ ಮೂಲಕ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದ್ದು,
ಈ ಸಂದರ್ಭದಲ್ಲಿ ಹಿರಿಯ ಮಹಿಳಾ ಗ್ರಾಮಸ್ಥ ನಾಗರಿಕರಾದ ಕಮಲಮ್ಮ, ಶಿಲೆಸ್ತಿನಾ, ಜೈ ಬುನ್ ಬಿ, ಇವರುಗಳಿಂದ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.
ಕಾರ್ಯಕ್ರಮದಲ್ಲಿ ಇಡೀ ಶಿವಮೊಗ್ಗ ಜಿಲ್ಲೆಯಲ್ಲಿ ಯಾವ ಗ್ರಾಮ ಪಂಚಾಯಿತಿಯಲ್ಲು ಸೇರದಿರುವಷ್ಟು ಸಾವಿರಾರು ಸಂಖ್ಯೆಯಲ್ಲಿ ಮಹಿಳೆಯರು ಸೇರಿದ್ದು ವಿಶೇಷವಾಗಿತ್ತು,
ಕಾರ್ಯಕ್ರಮದ ವೇಳೆಯಲ್ಲಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಶೈಲಾ ಅವರು ಭೇಟಿ ನೀಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಇಂದು ಅಣ್ಣ ತಂಗಿಯರ ಬಾಂಧವ್ಯ ಬೆಸೆಯುವ ರಕ್ಷಾ ಬಂಧನ ದಿನವಾಗಿದ್ದು,
ಈ ದಿನವೇ ಗೃಹ ಲಕ್ಷ್ಮೀ ಯೋಜನೆಗೆ ಚಾಲನೆ ದೊರಕಿರುವುದರಿಂದ,
ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಬಂಡೆ ವೆಂಕಟೇಶ್ ಅವರ ಪರಿಕಲ್ಪನೆಯಲ್ಲಿ ಗ್ರಾಮ ಪಂಚಾಯಿತಿಯಲ್ಲಿ ರಕ್ಷಾ ಬಂಧನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ವಿಶೇಷವಾಗಿತ್ತು.
ಗ್ರಾಮ ಪಂಚಾಯಿತಿಯ ಸಿಬ್ಬಂದಿಗಳು, ಅಂಗನವಾಡಿ ಆಶಾ ಕಾರ್ಯಕರ್ತೆಯರು ಎಲ್ಲರಿಗೂ ರಾಕಿ ಕಟ್ಟಿ ಸಂಭ್ರಮಿಸಿದರು.
ಈ ಕಾರ್ಯಕ್ರಮದಲ್ಲಿ ಉಪಾಧ್ಯಕ್ಷರಾದ ಶ್ರೀಮತಿ ಅನಿತಾ ಪ್ರವೀಣ್, ಸದಸ್ಯರುಗಳಾದ ಗೋಪಾಲ ಪೂಜಾರಿ, ಹೊರಬೈಲು ಪ್ರಭಾಕರ, ಆನಂದ,ನಿಶ್ಚಲ್ ಜಾದುಗಾರ್,ಭವ್ಯ,
ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಉಮೇಶ್,
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳಾದ ಚಂದ್ರಿಕಾ,
ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಗೀತಾ ರಾಘವೇಂದ್ರ,
ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗ ಸೇರಿದಂತೆ
ಅನೇಕ ಮಂದಿ ಉಪಸ್ಥಿತರಿದ್ದರು.