
ಶಿವಮೊಗ್ಗ : ನಾಳಿನ ವಿಮಾನ ಹಾರಾಟ ಆರಂಭೋತ್ಸವ ಕಾರ್ಯಕ್ರಮಕ್ಕೆ ಸಚಿವ ಮಧು ಬಂಗಾರಪ್ಪ ಹಾಜರಾಗುವ ಪ್ಲಾನ್ ಮಾಡಿದ್ದಾರೆ.
ಇಂದು ಶಿವಮೊಗ್ಗ ವಿಮಾನ ನಿಲ್ದಾಣ ದಲ್ಲಿ ಕಾರ್ಯಕ್ರಮದ ಪೂರ್ವ ಸಿದ್ಧತೆ ವೀಕ್ಷಣೆಗೆ ಆಗಮಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವರು ಪರಿಶೀಲನೆ ನಂತರ ಮಾಧ್ಯಮಗಳ ಬಳಿ ಮಾತನಾಡಿ ನಾಳೆ ಬೆಳಗ್ಗೆ ಕುವೆಂಪು ರಂಗಮಂದಿರದಲ್ಲಿ ಜಿಲ್ಲಾಡಳಿತ ವತಿಯಿಂದ ನಡೆಯುವ ಬ್ರಹ್ಮ ಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಂತರ ವಿಮಾನ ನಿಲ್ದಾಣದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಆಗಮಿಸುವ ಸಚಿವ ಎಮ್.ಬಿ ಪಾಟೀಲ್ ರವರನ್ನು ಬರಮಾಡಿಕೊಳ್ಳುವುದಾಗಿ ಹೇಳಿದ್ದಾರೆ.
ಕಾರ್ಯಕ್ರಮದ ನಂತರ ಸಚಿವರು ಬಂದ ಬೆಂಗಳೂರಿನಿಂದ ಬಂದ ವಿಮಾನದಲ್ಲಿ ವಾಪಸ್ ಬೆಂಗಳೂರಿಗೆ ತೆರಳುವುದಾಗಿ ತಿಳಿಸಿದ್ದಾರೆ.
ವರದಿ – ವಿನಯ್ ಕುಮಾರ್ ಹೆಚ್.ಎಮ್