
ಬೆಂಗಳೂರು> ಸೆಪ್ಟೆಂಬರ್> 04>ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಾಮರಾಜನಗರ ಹಾಗೂ ಹಾಸನ ಜಿಲ್ಲೆಗಳ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿ ಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿ ಕೋವಿಡ್ 19 ಸ್ಥಿತಿಗತಿ ಕುರಿತು ಪರಾಮರ್ಶೆ ನಡೆಸಿದರು. ಅಗತ್ಯ ಮಾಹಿತಿಗಳನ್ನು ಪಡೆದುಕೊಳ್ಳುವುದರ ಜೊತೆಗೆ, ಒಂದಷ್ಟು ಸಲಹೆ ಸೂಚನೆಗಳನ್ನು ನೀಡಿದರು.

ಈ ಸಂದರ್ಭದಲ್ಲಿ ಗೃಹಸಚಿವರಾದ ಆರಗ ಜ್ಞಾನೇಂದ್ರ, ಕೋಟ ಶ್ರೀನಿವಾಸ ಪೂಜಾರಿ, ಆರ್.ಅಶೋಕ್, ಸುನೀಲ್ ಕುಮಾರ್, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು…
ವರದಿ… ಪವನ್ ಎಂ,ಸಿ…
ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ…9449553305/7892830899…