Wednesday, April 30, 2025
Google search engine
Homeರಾಜ್ಯ5 ದಿನದ ಗಣೇಶೋತ್ಸವಕ್ಕೆ 50 ಷರತ್ತು ವಿಧಿಸಿದ ಸರ್ಕಾರ...... ಷರತ್ತುಗಳು ಪಾಲನೆ ಆಗುತ್ತಾ?

5 ದಿನದ ಗಣೇಶೋತ್ಸವಕ್ಕೆ 50 ಷರತ್ತು ವಿಧಿಸಿದ ಸರ್ಕಾರ…… ಷರತ್ತುಗಳು ಪಾಲನೆ ಆಗುತ್ತಾ?

ಬೆಂಗಳೂರು>ಸೆಪ್ಟೆಂಬರ್ 5>ಕೊನೆಗೂ ರಾಜ್ಯ ಸರ್ಕಾರ ಗಣೇಶೋತ್ಸವಕ್ಕೆ ಅನುಮತಿ ನೀಡಿದ್ದು. ರಾಜ್ಯದಾದ್ಯಂತ ಐದು ದಿನಗಳ ಕಾಲ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಷರತ್ತುಬದ್ಧ ಅನುಮತಿ ನೀಡಲಾಗಿದ್ದು. ಮೆರವಣಿಗೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ನಿಷೇಧ ಹೇರಲು ತೀರ್ಮಾನಿಸಲಾಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಭಾನುವಾರ ನಡೆದ ಕೋವಿಡ್‌ ನಿರ್ವಹಣೆಗೆ ಸಂಬಂಧಿಸಿದ ಉನ್ನತಮಟ್ಟದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ
ಪೊಲೀಸ್‌ ಇಲಾಖೆ ಹಾಗೂ ಸ್ಥಳೀಯ ಆಡಳಿತ ಸಂಸ್ಥೆಗಳು ವಿಧಿಸುವ ಷರತ್ತುಗಳನ್ನು ಪಾಲಿಸಿಕೊಂಡು ಗಣೇಶೋತ್ಸವ ಆಚರಣೆಗೆ ಅವಕಾಶ ನೀಡಲು ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

ಸಭೆಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಕಂದಾಯ ಸಚಿವ ಆರ್‌. ಅಶೋಕ, ʼಗರಿಷ್ಠ ಐದು ದಿನಗಳವರೆಗೆ ಮಾತ್ರ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಲಾಗುವುದು. ನಗರ ಪ್ರದೇಶಗಳಲ್ಲಿ ವಾರ್ಡ್‌ಗೆ ಒಂದು ಹಾಗೂ ಹಳ್ಳಿಗಳಲ್ಲಿ ಸ್ಥಳೀಯ ಆಡಳಿತದ ತೀರ್ಮಾನದಂತೆ ಸಾರ್ವಜನಿಕ ಗಣೇಶೋತ್ಸವ ನಡೆಸಲು ಅನುಮತಿ ನೀಡಲಾಗುವುದುʼ ಎಂದರು.

ಮಹಾನಗರಗಳಲ್ಲಿ ಪ್ರತಿ ವಾರ್ಡ್‌ಗೆ ಒಂದು ಸ್ಥಳದಲ್ಲಿ ಮಾತ್ರ ಗಣೇಶ ವಿಗ್ರಹ ಪ್ರತಿಷ್ಠಾಪನೆಗೆ ಅವಕಾಶ ದೊರೆಯಲಿದೆ. ಪೊಲೀಸರು ಕಾರ್ಯಕ್ರಮ ಸಂಘಟಕರ ಜತೆ ಚರ್ಚಿಸಿ ಈ ಕುರಿತು ಅಂತಿಮ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಹೇಳಿದರು.

ಡಿ.ಜೆ. ಧ್ವನಿವರ್ಧಕ ಬಳಕೆಗೆ ಅನುಮತಿ ಇರುವುದಿಲ್ಲ. ಗಣೇಶ ವಿಗ್ರಹಗಳ ವಿಸರ್ಜನೆಗೆ ಮೆರವಣಿಗೆ ನಡೆಸುವಂತಿಲ್ಲ. ನಿಗದಿತ ಸಂಖ್ಯೆಯ ಜನರು ಮಾತ್ರ ಗಣೇಶ ವಿಗ್ರಹ ವಿಸರ್ಜನೆಯಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಲಾಗುವುದು. ಶಾಲೆ, ಕಾಲೇಜುಗಳಲ್ಲಿ ಗಣೇಶೋತ್ಸವ ಆಚರಣೆಗೆ ಅವಕಾಶವಿಲ್ಲ ಎಂದು ತಿಳಿಸಿದರು.

50X50 ಅಡಿ ವಿಸ್ತೀರ್ಣದ ಪೆಂಡಾಲ್‌ನಲ್ಲಿ 20 ಜನರು ಮಾತ್ರ ಪಾಲ್ಗೊಳ್ಳಲು ಅವಕಾಶವಿದೆ. ಸಾರ್ವಜನಿಕರು ಮತ್ತು ವಾಹನಗಳ ಸಂಚಾರಕ್ಕೆ ಅಡ್ಡಿಯಾಗುವಂತೆ ಗಣೇಶೋತ್ಸವ ಆಚರಣೆ ಮಾಡುವಂತಿಲ್ಲ ಎಂದು ವಿವರಿಸಿದರು.


ಕೋವಿಡ್ ಲಸಿಕೆ ಕಡ್ಡಾಯ>ಸಾರ್ವಜನಿಕ ಗಣೇಶೋತ್ಸವದಲ್ಲಿ ಪಾಲ್ಗೊಳ್ಳುವವರು ಕೋವಿಡ್‌ ಲಸಿಕೆ ಹಾಕಿಸಿಕೊಂಡಿರುವುದು ಕಡ್ಡಾಯ. ಕಾರ್ಯಕ್ರಮ ಸಂಘಟಕರು ಕೋವಿಡ್‌ ಪರೀಕ್ಷೆಯನ್ನೂ ಮಾಡಿಸಿಕೊಂಡಿರಬೇಕು ಎಂದು ಅಶೋಕ್ ಹೇಳಿದರು.

ಕಾರ್ಯಕ್ರಮ ನಡೆದ ಸ್ಥಳದಲ್ಲೇ ಕೋವಿಡ್‌ ಲಸಿಕೆ ನೀಡಲು ವ್ಯವಸ್ಥೆ ಮಾಡಬೇಕು. ಆ ಪ್ರದೇಶದಲ್ಲಿ ಲಸಿಕೆ ನೀಡುವುದನ್ನು ಹೆಚ್ಚಿಸಬೇಕು ಎಂಬ ಷರತ್ತುಗಳನ್ನೂ ವಿಧಿಸಲಾಗಿದೆ.

ಕೋವಿಡ್ ಪಾಸಿಟಿವ್ ಪ್ರಮಾಣ 2ಕ್ಕಿಂತ ಕಡಿಮೆಯಾದ ಪ್ರದೇಶದಲ್ಲಿ ಮಾತ್ರ ಅವಕಾಶ…

ಗಡಿ ಜಿಲ್ಲೆಗಳಲ್ಲಿ ಕೋವಿಡ್‌ ಪ್ರಕರಣಗಳ ದೃಢಪ್ರಮಾಣ ದರ ಶೇಕಡ 2ಕ್ಕಿಂತ ಕಡಿಮೆಯಾದರೆ ಮಾತ್ರ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಲು ಆಯಾ ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಲು ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಕೋವಿಡ್‌ ತಾಂತ್ರಿಕ ಸಲಹಾ ಸಮಿತಿ ಮತ್ತು ತಜ್ಞರ ಸಮಿತಿ ಸದಸ್ಯರು ಸಭೆಯಲ್ಲಿ ಪಾಲ್ಗೊಂಡಿದ್ದರು. ಸೆಪ್ಟೆಂಬರ್‌ ಮತ್ತು ಅಕ್ಟೋಬರ್‌ ತಿಂಗಳಲ್ಲಿ ಹೆಚ್ಚು ಎಚ್ಚರಿಕೆ ವಹಿಸಬೇಕೆಂಬ ಸಲಹೆ ಬಂದಿದೆ. ರಾತ್ರಿ ಕರ್ಫ್ಯೂ ಯಥಾವತ್ತಾಗಿ ಮುಂದುವರಿಯಲಿದೆ ಎಂದರು.

ಒಟ್ಟಾರೆ ಹಲವು ಚರ್ಚೆಗಳ ಬಳಿಕ ಗಣೇಶೋತ್ಸವಕ್ಕೆ ಅನುಮತಿ ನೀಡಿರುವ ಸರ್ಕಾರ ಹಲವು ಷರತ್ತುಗಳನ್ನು ವಿಧಿಸಿದೆ. ವಿಧಿಸಿರುವ ನಿಯಮಗಳನ್ನು, ಷರತ್ತುಗಳನ್ನು, ಎಲ್ಲಾ ಸಂಘಟಕರು ಕಡ್ಡಾಯವಾಗಿ ಪಾಲಿಸುತ್ತಾರ ಕಾದು ನೋಡಬೇಕು….

ವರದಿ.. ರಘುರಾಜ್ ಹೆಚ್. ಕೆ…

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ…9449553305/7892830899…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...