
ಶಿವಮೊಗ್ಗ: ಸೆಪ್ಟೆಂಬರ್ 3 ಮತ್ತು 4ರಂದು ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ನಡೆದ, ಯುನೈಟೆಡ್ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಕ್ಲಬ್ ಶಿವಮೊಗ್ಗ ಇವರು ಆಯೋಜಿಸಿರುವ ಶಿವಮೊಗ್ಗ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಬಾಲಕರ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯಲ್ಲಿ ಸಹ್ಯಾದ್ರಿ ಶಿಕ್ಷಣ ಸಂಸ್ಥೆಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಶಿವಮೊಗ್ಗ ಜಿಲ್ಲೆಗೆ ದ್ವಿತೀಯ ಸ್ಥಾನವನ್ನು ಪಡೆದುಕೊಂಡು ತೀರ್ಥಹಳ್ಳಿ ತಾಲ್ಲೂಕಿಗೆ ಮತ್ತು ಶಿಕ್ಷಣ ಸಂಸ್ಥೆಗೆ ಕೀರ್ತಿಯನ್ನು ತಂದಿರುತ್ತಾರೆ.
ಈ ಪ್ರತಿಭಾವಂತ ಕ್ರೀಡಾಪಟುಗಳನ್ನು ಹಾಗೂ ಇವರನ್ನು ತರಬೇತಿಗೊಳಿಸಿದ ದೈಹಿಕ ಶಿಕ್ಷಣ ಶಿಕ್ಷಕರಾದ ಜಗದೀಶ್ ಎಂ ಎಸ್ ಇವರನ್ನು ಸಹ್ಯಾದ್ರಿ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ, ಆಡಳಿತಾಧಿಕಾರಿಗಳು, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ವರ್ಗದವರು ಹಾರ್ದಿಕವಾಗಿ ಅಭಿನಂದಿಸಿ ಶುಭ ಹಾರೈಸಿರುತ್ತಾರೆ.