
ತೀರ್ಥಹಳ್ಳಿ: ಸೆಪ್ಟೆಂಬರ್ 7ಮತ್ತು 8ರಂದು ಸರ್ಕಾರಿ ಪ್ರೌಢಶಾಲೆ ಕಡ್ತೂರಿನಲ್ಲಿ ನಡೆದ ವಲಯ ಮತ್ತು ತಾಲ್ಲೂಕು ಮಟ್ಟದ ಬಾಲಕಿಯರ ಗುಂಪು ಆಟಗಳಲ್ಲಿ ನಮ್ಮ ಸಹ್ಯಾದ್ರಿ ಪ್ರೌಢಶಾಲೆಯ ವಿದ್ಯಾರ್ಥಿನಿಯರು ವಲಯ ಮಟ್ಟದಲ್ಲಿ ಬಾಲಕಿಯರ ವಾಲಿಬಾಲ್ ಪ್ರಥಮ, ತ್ರೋಬಾಲ್ ಪ್ರಥಮ ಬಾಲ್ ಬ್ಯಾಡ್ಮಿಂಟನ್ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ ಹಾಗೂ ತಾಲ್ಲೂಕು ಮಟ್ಟದಲ್ಲಿ ಥ್ರೋಬಾಲ್ ದ್ವೀತೀಯ ಸ್ಥಾನ ಮತ್ತು ವಾಲಿಬಾಲ್ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ಹಾಗೂ ಬಾಲಕಿಯರ ಗುಂಪು ಆಟಗಳ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿರುತ್ತಾರೆ.

ಈ ಪ್ರತಿಭಾವಂತ ಕ್ರೀಡಾಪಟುಗಳನ್ನು ಹಾಗೂ ಇವರನ್ನು ತರಬೇತಿಗೊಳಿಸಿದ ದೈಹಿಕ ಶಿಕ್ಷಣ ಶಿಕ್ಷಕರಾದ ಜಗದೀಶ್ ಎಂ ಎಸ್ ಇವರನ್ನು ಸಹ್ಯಾದ್ರಿ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ, ಆಡಳಿತಾಧಿಕಾರಿಗಳು,ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ವರ್ಗದವರು ಹಾರ್ದಿಕವಾಗಿ ಅಭಿನಂದಿಸಿ ಶುಭ ಹಾರೈಸಿರುತ್ತಾರೆ.