
ಶಿವಮೊಗ್ಗ: ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕಿಯಾಗಿ ಕಾಂಗ್ರೆಸ್ ಪಕ್ಷದ ಮೆಹಕ್ ಷರೀಫ್ ಹಾಗೂ ಮಾಜಿ ವಿರೋಧ ಪಕ್ಷದ ನಾಯಕಿಯಾದ ಯಮುನಾ ರಂಗೇಗೌಡ ಹಣಕಾಸು ಮತ್ತು ಲೆಕ್ಕಪತ್ರ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನ ಜಿಲ್ಲಾಧ್ಯಕ್ಷರಾದ ಎಚ್ಎಸ್ ಸುಂದರೇಶ್ ಅವರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಹಿಂದೆ ಲೆಕ್ಕಪತ್ರ ಮತ್ತು ತೆರಿಗೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿದ್ದ ಶ್ರೀಮತಿ ಮೆಹಕ್ ಷರೀಫ್ ಹಾಗೂ ಯಮುನಾ ರಂಗೇಗೌಡ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದ್ದು. ಈ ಸಭೆಯಲ್ಲಿ ಮಹಾನಗರ ಪಾಲಿಕೆಯ ಸದಸ್ಯರಾದ ಹೆಚ್. ಸಿ ಯೋಗೇಶ್ ಆರ್, ಸಿ ನಾಯಕ್, ಶಾಮೀರ್ ಖಾನ್ ಯಮುನಾ ರಂಗೇಗೌಡ, ಮಂಜುಳಾ ಶಿವಣ್ಣ, ಮಾಜಿ ವಿರೋಧ ಪಕ್ಷದ ನಾಯಕಿಯಾದ ರೇಖಾ ರಂಗನಾಥ್ ಉಪಸ್ಥಿತರಿದ್ದರು.
ಸಭೆಯಲ್ಲಿ ನಡೆದ ತೀರ್ಮಾನದಂತೆ ಕಾಂಗ್ರೆಸ್ ಪಕ್ಷದ ಮಹಾನಗರ ಪಾಲಿಕೆಯ ಸದಸ್ಯರುಗಳು ಶ್ರೀಮತಿ ಮೆಹಕ್ ಷರೀಫ್ ಅವರನ್ನು ಮಹಾ ನಗರಪಾಲಿಕೆ ವಿರೋಧ ಪಕ್ಷದ ನಾಯಕಿಯಾಗಿ ಹಾಗೂ ಮಾಜಿ ವಿರೋಧ ಪಕ್ಷದ ನಾಯಕಿಯಾದ ಯಮುನಾ ರಂಗೇಗೌಡ ಅವರನ್ನು ಹಣಕಾಸು ಮತ್ತು ಲೆಕ್ಕಪತ್ರ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಸೂಚಿಸಿದ್ದು ನಂತರ ಅದನ್ನು ಮಹಾನಗರ ಪಾಲಿಕೆಯ ಮಹಾಪೌರರ ಗಮನಕ್ಕೆ ಹಾಗೂ ಆಯುಕ್ತರ ಗಮನಕ್ಕೆ ತರಲಾಗಿದ್ದು ಆಯುಕ್ತರು ಅಂಗೀಕರಿಸಲು ಮಹಾಪೌರರಿಗೆ ಸಲ್ಲಿಸಿರುತ್ತಾರೆ.
ರಘುರಾಜ್ ಹೆಚ್.ಕೆ.9449553305.