
ಶಿವಮೊಗ್ಗ- ಸೆ.13ರಂದು ನಗರದ ಆದಿ ಚುಂಚನಗಿರಿ ಸಮುದಾಯ ಭವನದಲ್ಲಿ ಒಕ್ಕಲಿಗರ ಯುವ ವೇದಿಕೆಯಿಂದ ಯುವ ಸಮಾವೇಶ ಹಾಗು ಪ್ರತಿಭಾ ಪುರಸ್ಕಾರ ಹಾಗು ಒಕ್ಕಲಿಗ ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದ ವಿಧ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣೆ, ಸಮುದಾಯದ ಸಾಧಕರಿಗೆ ಸನ್ಮಾನ ಮತ್ತು ವಿಶೇಷ ಚೇತನರಿಗೆ ವೀಲ್ ಚೇರ್, ವಾಕರ್ ಹಾಗು ವಾಕ್ ಸ್ಟಿಕ್ ವಿತರಣೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ವೇದಿಕೆ ಆಧ್ಯಕ್ಷ ಚೇತನ್.ಕೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಢದ ಪೀಠಾಧ್ಯಕ್ಷರಾದ ಪರಮ ಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದ ಮಹಾ ಸ್ವಾಮೀಜಿರವರು, ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಮಹಾಸ್ವಾಮೀಜಿಯವರ ದಿವ್ಯ ಸಾನಿಧ್ಯ ಇರಲಿದೆ.
120 ವಿಧ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, 30 ಜನ ವಿಶೇಷ ಚೇತನರಿಗೆ ವೀಲ್ ಚೇರ್, 50 ಬಡ ವಿಧ್ಯಾರ್ಥಿಗಳಿಗೆ ತಲಾ ಒಬ್ಬರಿಗೆ 5ಸಾವಿರ ಪ್ರೋತ್ಸಾಹ ಧನ ನೀಡಲಾಗುವುದು.
ಇದೇ ಸಂಧರ್ಭದಲ್ಲಿ ಕರ್ನಾಟಕ ಸರ್ಕಾರದ ಉಪ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಡಿ.ಕೆ ಶಿವಕುಮಾರ್ ರವರಿಗೆ ಸನ್ಮಾನ ಮಾಡಲಾಗುವುದು. ಕಾರ್ಯಕ್ರಮದಲ್ಲಿ ಒಕ್ಕಲಿಗ ಸಮಾಜದ ಜನಪ್ರತಿನಿಧಿಗಳು ಉಪಸ್ಥಿತಿ ಇರುತ್ತದೆ ಎಂದು ತಿಳಿಸಿದರು.
ವರದಿ – ವಿನಯ್ ಕುಮಾರ್ ಹೆಚ್.ಎಮ್