Home ಶಿವಮೊಗ್ಗಶಿವಮೊಗ್ಗ:ಜೈಲು ಸಿಬ್ಬಂದಿಗಳಿಗೆ ಒತ್ತಡ ನಿರ್ವಹಣೆ ಕುರಿತು ತರಬೇತಿ ನೀಡಿದ ಡಾ.ಆನಂದ್ ಕುಮಾರ್ ತ್ರಿಪಾಠಿ ಹಾಗೂ ರಮಾನಂದ್ ಗಾರ್ಗಿ..!

ಶಿವಮೊಗ್ಗ:ಜೈಲು ಸಿಬ್ಬಂದಿಗಳಿಗೆ ಒತ್ತಡ ನಿರ್ವಹಣೆ ಕುರಿತು ತರಬೇತಿ ನೀಡಿದ ಡಾ.ಆನಂದ್ ಕುಮಾರ್ ತ್ರಿಪಾಠಿ ಹಾಗೂ ರಮಾನಂದ್ ಗಾರ್ಗಿ..!

by EDITOR NEWS WARRIORS
0 comments



ಶಿವಮೊಗ್ಗ:ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯದ ಕ್ಯಾಂಪಸ್ ನಿರ್ದೇಶಕರಾದ ಡಾ.ಆನಂದ್ ಕುಮಾರ್ ತ್ರಿಪಾಠಿ ಮತ್ತು ಹೊಸದಾಗಿ ನೇಮಕಗೊಂಡಿರುವ ಕ್ಯಾಂಪಸ್ ನಿರ್ದೇಶಕ ರಮಾನಂದ್ ಗಾರ್ಗಿ, ಬೋಧಕ ವರ್ಗ ಮತ್ತು ವಿದ್ಯಾರ್ಥಿಗಳು ಬುಧವಾರ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿ ಅಲ್ಲಿನ ಸಿಬ್ಬಂದಿಗಳಿಗೆ ಒತ್ತಡ ನಿರ್ವಹಣೆ ಕುರಿತು ತರಬೇತಿ ನೀಡಿದರು.


ಕಾರಾಗೃಹದ ಮುಖ್ಯ ಅಧೀಕ್ಷಕಿ ಅನಿತಾ ಆರ್ ಸ್ವಾಗತಿಸಿ, 2023 ರ ಮಾರ್ಚ್‍ನಲ್ಲಿ ಸ್ಥಾಪನೆಗೊಂಡಿರುವ ಆರ್‍ಆರ್‍ಯು(ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯ)ದ ದೃಷ್ಟಿಕೋನ ಮತ್ತು ಧ್ಯೇಯದ ಕುರಿತು ಸಿಬ್ಬಂದಿಗಳಿಗೆ ಪರಿಚಯಿಸಿದರು. ಇದೊಂದು ಹೆಮ್ಮೆಯ ಸಂಸ್ಥೆಯಾಗಿದ್ದು, ಗುಣಮಟ್ಟದ ಶಿಕ್ಷಣವನ್ನು ನೀಡುತ್ತದೆ ಎಂದರು.


ಕಾರಾಗೃಹದಲ್ಲಿ ಕರ್ತವ್ಯ ನಿರ್ವಹಿಸುವುದು ಒತ್ತಡಭರಿತ ಕೆಲಸವಾಗಿದ್ದು ಇದನ್ನು ನಿರ್ವಹಿಸಲು ವೈಜ್ಞಾನಿಕ ಸಾಧನಗಳ ಅವಶ್ಯಕತೆ ಇರುತ್ತದೆ. ಆರ್‍ಆರ್‍ಯು ಈ ನಿಟ್ಟಿನಲ್ಲಿ ಒತ್ತಡ ನಿರ್ವಹಣೆ ಕುರಿತು ಸಿಬ್ಬಂದಿಗಳಿಗೆ ತರಬೇತಿ ನೀಡಲಿದೆ ಎಂದ ಅವರು ಆರ್‍ಆರ್‍ಯು ಗೆ ಉತ್ತಮ ಯಶಸ್ಸು ಲಭಿಸಲಿ ಹಾಗೂ ತಮ್ಮ ಕಡೆಯಿಂದ ಎಲ್ಲ ರೀತಿಯ ಸಮನ್ವಯ ಮತ್ತು ಬೆಂಬಲವನ್ನು ನೀಡುವುದಾಗಿ ತಿಳಿಸಿದರು.


ಕ್ಯಾಂಪಸ್ ನಿರ್ದೇಶಕ ಡಾ.ಆನಂದಕುಮಾರ್ ತ್ರಿಪಾಠಿ ಮಾತನಾಡಿ, ನ್ಯಾಯದಾನದಲ್ಲಿ ಕಾರಾಗೃಹದ ಪಾತ್ರ ಅತ್ಯಗತ್ಯವಾಗಿದೆ ಎಂದ ಅವರು ಕಾರಾಗೃಹ ಮತ್ತು ಸಿಬ್ಬಂದಿಗಳ ಮಹತ್ವವನ್ನು ತಿಳಿಸಿದರು.
ಕ್ಯಾಂಪಸ್ ನಿರ್ದೇಶಕ ರಮಾನಂದ ಗಾರ್ಗಿ ಮಾತನಾಡಿ, ಒತ್ತಡ ನಿರ್ವಹಣೆ ಸುಲಭದ ಕೆಲಸವಲ್ಲ. ಆದರೆ ಶಾಂತಿಯುತ ಜೀವನ ನಡೆಸಲು ನಾವು ಒತ್ತಡವನ್ನು ಸಮರ್ಥವಾಗಿ ನಿಭಾಯಿಸಬೇಕೆಂದರು.


ಈ ತರಬೇತಿ ಕಾರ್ಯಕ್ರಮದಲ್ಲಿ ಆರ್‍ಆರ್‍ಯು ಕ್ಲಿನಿಕಲ್ ಸೈಕಾಲಜಿಸ್ಟ್ ಮತ್ತು ಅಸೋಸಿಯೇಟ್ ಪ್ರೊಫೆಸರ್ ಡಾ.ನಂದಕುಮಾರ್ ಪೂಜಂ ಮಾತನಾಡಿ, ಒತ್ತಡ ಮತ್ತು ಅದು ದೇಹ ಹಾಗೂ ಮನಸ್ಸಿನ ಮೇಲೆ ಬೀರುವ ದುಷ್ಪರಿಣಾಮದ ಕುರಿತು ವಿವರಣೆ ನೀಡಿದ ಅವರು ಒತ್ತಡ ನಿರ್ವಹಿಸುವ ತಂತ್ರಗಳ ಕುರಿತು ಪ್ರಾಯೋಗಿಕವಾಗಿ ಸಿಬ್ಬಂದಿಗಳನ್ನು ತೊಡಗಿಸಿದರು.

ಸುದ್ದಿ ಕೃಪೆ: ವಾರ್ತಾ ಇಲಾಖೆ ಶಿವಮೊಗ್ಗ.

Related Articles

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...