
ತೀರ್ಥಹಳ್ಳಿ : ತಾಲೂಕು ಆರ್ಯ ಈಡಿಗರ ಸಂಘ, ಕೋಳಿಕಾಲುಗುಡ್ಡ ಸಂಘದ ವತಿಯಿಂದ ಇಂದು ನೂತನ ವಿದ್ಯಾರ್ಥಿ ನಿಲಯ ಹಾಗೂ ದಿ.ಪುನೀತ್ ರಾಜಕುಮಾರ್ ಅವರ ಪುತ್ತಳಿ ಮಾಜಿ ಮುಖ್ಯಮಂತ್ರಿ ದಿ.ಬಂಗಾರಪ್ಪ ಅವರ ಪುತ್ಥಳಿಯನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಮಧು ಬಂಗಾರಪ್ಪ, ಶ್ರೀ ಕ್ಷೇತ್ರ, ಸಿಗಂದೂರು ಧರ್ಮದರ್ಶಿಗಳಾದ ಶ್ರೀರಾಮಪ್ಪ, ಮಾಜಿ ಮಂತ್ರಿಗಳಾದ ಕಾಗೋಡು ತಿಮ್ಮಪ್ಪ ಅವರು, ಬ್ರಹ್ಮಶ್ರೀ ನಾರಾಯಣ ಗುರು ಮಹಾಸಂಸ್ಥಾನ ಗರ್ತಿಕೆರೆ ಇದರ ಪೀಠಾಧಿಪತಿ ಶ್ರೀ ಶ್ರೀ ರೇಣುಕಾನಂದ ಸ್ವಾಮೀಜಿ ಅನಾವರಣ ಮಾಡಿದರು.
ಈ ಸಂದರ್ಭದಲ್ಲಿ ತೀರ್ಥಹಳ್ಳಿ ಕ್ಷೇತ್ರದ ಶಾಸಕರಾದ ಆರಗ ಜ್ಞಾನೇಂದ್ರ, ಸಾಗರ ಕ್ಷೇತ್ರದ ಶಾಸಕರಾದ ಬೇಳೂರು ಗೋಪಾಲಕೃಷ್ಣ, ಮಾಜಿ ಸಚಿವರಾದ ಕಿಮ್ಮನೆ ರತ್ನಾಕರ್,
ಮಾಜಿ ಅಪೇಕ್ಸ್ ಬ್ಯಾಂಕ್ ಅಧ್ಯಕ್ಷರಾದ ಆರ್ ಮಂಜುನಾಥ್ ಗೌಡ,
ತಾಲೂಕು ಆರ್ಯ ಈಡಿಗರ ಸಂಘದ ಅಧ್ಯಕ್ಷ ಮುಟ್ಟಿನ ಮನೆ ರಾಮಚಂದ್ರ, ಸೇರಿದಂತೆ ಅನೇಕ ಗಣ್ಯರು ಮುಖಂಡರು ಮತ್ತು ಎಲ್ಲಾ ನಿರ್ದೇಶಕರುಗಳು
ಅಭಿಮಾನಿಗಳು ಉಪಸ್ಥಿತರಿದ್ದರು.