Wednesday, April 30, 2025
Google search engine
Homeರಾಜ್ಯಸ್ವಯಂಘೋಷಿತ ಸ್ವಾಮೀಜಿ ಪ್ರಣವಾನಂದ ಸ್ವಾಮೀಜಿಗೂ ಈಡಿಗ ಸಮುದಾಯಕ್ಕೂ ಯಾವುದೇ ರೀತಿಯ ಸಂಬಂಧ ವಿಲ್ಲ ಈಡಿಗ ಸಂಘ...

ಸ್ವಯಂಘೋಷಿತ ಸ್ವಾಮೀಜಿ ಪ್ರಣವಾನಂದ ಸ್ವಾಮೀಜಿಗೂ ಈಡಿಗ ಸಮುದಾಯಕ್ಕೂ ಯಾವುದೇ ರೀತಿಯ ಸಂಬಂಧ ವಿಲ್ಲ ಈಡಿಗ ಸಂಘ ಸ್ಪಷ್ಟನೆ..!

ಪ್ರಣವಾನಂದ ಸ್ವಾಮೀಜಿಗೂ ಈಡಿಗ ಸಮುದಾಯಕ್ಕೂ ಯಾವುದೇ ರೀತಿಯ ಸಂಬಂಧ ವಿಲ್ಲ; ಈಡಿಗ ಸಂಘ ಸ್ಪಷ್ಟನೆ.

ಸ್ವಯಂ ಘೋಷಿತ ಸ್ವಾಮೀಜಿ ಯೆಂದು ಪೋಷಿಸಿಕೊಂಡು ತಿರುಗುತ್ತಿರುವ ಪ್ರಣವಾನಂದ ಸ್ವಾಮೀಜಿಗಳಿಗೂ ಈಡಿಗ ಸಮುದಾಯಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ಕರ್ನಾಟಕ ಪ್ರದೇಶ ಈಡಿಗರ ಸಂಘ ಸ್ಪಷ್ಟ ಪಡಿಸಿದೆ.

ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಈಡಿಗ ಸಂಘದ ಅಧ್ಯಕ್ಷ ತಿಮ್ಮೇಗೌಡ, ಪ್ರಣವಾನಂದ ಸ್ವಾಮೀಜಿಗಳು ಈಡಿಗ ಸಮುದಾಯದ ಸ್ವಯಂ ಘೋಷಿತ ಸ್ವಾಮೀಜಿಗಳೆಂದು ಹೇಳಿಕೊಂಡು ಒಡಾಡುತ್ತಿದ್ದಾರೆ.ಈಡಿಗ ಸಮುದಾಯಕ್ಕೂ ಸ್ವಾಮೀಜಿಗಳಿಗೂ ಯಾವುದೇ ರೀತಿಯ ಸಂಬಂಧವಿಲ್ಲ. ಈತ ಸಮುದಾಯದಲ್ಲಿ ಒಡಕು ಮೂಡಿಸುತ್ತಿರುವುದು. ರಾಜಕೀಯ ಮುಖಂಡರಲ್ಲಿ ಬಿನ್ನಭಿಪ್ರಾಯಗಳನ್ನು ಮೂಡಿಸಿ ರಾಜಕೀಯ ಕ್ಷೇತ್ರದಲ್ಲಿ ಅಲ್ಲೊಲ ಕೊಲ್ಲೋಲ ಮೂಡಿಸುತ್ತಿರುವುದು ಕಂಡು ಬಂದಿದ್ದು ಇದು ಸರಿಯಲ್ಲ. ನಮ್ಮ ಕೇಂದ್ರ ಸಂಘ ಹಾಗೂ ಜಿಲ್ಲಾ ಸಂಘಗಳ ವಿರುದ್ಧ ಆಧಾರರಹಿತ ಹೇಳಿಕೆಗಳನ್ನು ನೀಡುತ್ತಿರುವುದು ಕಂಡು ಬಂದಿದ್ದು ಈತನ ವಿರುದ್ಧ ಕಾನೂನು ಕ್ರಮ ಜರುಗಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.

ಈಡಿಗ ಸಮುದಾಯ ಸಂಘ ಸ್ಥಾಪನೆಯಾಗಿ 78 ವರ್ಷಗಳು ಕಳೆದಿವೆ.2008ರಲ್ಲಿ ರೇಣುಕಾನಂದ ಎಂಬುವವರನ್ನು ಸ್ವಾಮೀಜಿಗಳನ್ನಾಗಿ ನೇಮಕ ಮಾಡಲಾಯಿತು. ಬಳಿಕ ರೇಣುಕಾನಂದರವರು ತಮ್ಮ ಹೆಚ್ಚಿನ ಆಧ್ಯಾತ್ಮಿಕ ಅಧ್ಯಯನಕ್ಕಾಗಿ 2014 ರಲ್ಲಿ ಪೀಠವನ್ನು ತ್ಯಜಿಸಿದರು. ಪ್ರಸ್ತುತ ಬಿ.ಕೆ.ಹರಿಪ್ರಸಾದ್ ಅವರ ಒಪ್ಪಿಗೆ ಮೇರೆಗೆ ವಿಖ್ಯಾತನಂದ ಸ್ವಾಮೀಜಿಗಳನ್ನು ನೇಮಕ ಮಾಡಿಕೊಂಡು ಅಧಿಕೃತವಾಗಿ ಒಪ್ಪಿಗೆ ಪಡೆಯಲಾಗಿದೆ. ಆದರೆ ಪ್ರಣವಾನಂದ ಅನಧಿಕೃತವಾಗಿ ಈಡಿಗ ಸ್ವಾಮೀಜಿಗಳೆಂದು ಹೇಳಿಕೊಂಡು ಜನಾಂಗವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ ಅವರ ವಿರುದ್ಧ ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಸುದ್ದಿಗೋಷ್ಟಿಯಲ್ಲಿ ಸಂಘದ ನಿರ್ದೇಶಕರಾದ ಶಿವಕುಮಾರ್, ಶಿವಮೊಗ್ಗ ಜಿಲ್ಲಾ ಸಂಘದ ಅಧ್ಯಕ್ಷ ಶ್ರೀಧರ್,ರಾಮನಗರ, ಚಿತ್ರದುರ್ಗ, ಬೆಳಗಾವಿ ಜಿಲ್ಲಾ ಅಧ್ಯಕ್ಷರು,ಬಿಲ್ಲವ ಅಸೊಶಿಯೇಶನ್ ಪ್ರದಾನ ಕಾರ್ಯದರ್ಶಿ ಸಂಪತ್ ಕುಮಾರ್, ನಾಮದಾರಿ ದೀವರ ಅಧ್ಯಕ್ಷರು ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...