
ಶಿವಮೊಗ್ಗ:ಶಾಲೆಯ ಶೈಕ್ಷಣಿಕ ಮತ್ತು ಆಡಳಿತಾತ್ಮಕ ಬೆಳವಣಿಗೆಯಲ್ಲಿ ಪ್ರಮುಖ ಬದಲಾವಣೆ ತರುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಆದೇಶಕ್ಕೆ ಬೆಂಬಲವಾಗಿ ದುರ್ಗಿಗುಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಗೆ ಫೇಸ್ ಬಯೋಮೆಟ್ರಿಕ್ ಹಾಜರಾತಿ ಸಾಧನವನ್ನು ದೇಣಿಗೆಯಾಗಿ ನೀಡಲಾಗಿದೆ. ನಗರದ ‘ಉತ್ತಿಷ್ಠ ಭಾರತ ಮತ್ತು ಸಿಹಿಮೊಗೆ ಕ್ರಿಕೆಟ್ ಅಕಾಡೆಮಿ (ರಿ)’ ಸಂಸ್ಥೆಯ ವತಿಯಿಂದ ನೀಡಲಾದ ಈ ಸಾಧನವನ್ನು ಸಂಸ್ಥೆಯ ಕಾರ್ಯದರ್ಶಿಯಾದ ಬಾಲಕೃಷ್ಣ ನಾಯ್ಡುರವರು ಶಿವಮೊಗ್ಗ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಪಿ. ನಾಗರಾಜ್ ಮೂಲಕ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ನಿವೃತ್ತ ಪ್ರೊಫೆಸರ್ ಹಾಗೂ ಶಿವಮೊಗ್ಗ ನಾಗರಿಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟ ಸಂಸ್ಥೆಯ ಸಂಘಟನಾ ಕಾರ್ಯದರ್ಶಿಯಾದ ಸತೀಶ್ ಕುಮಾರ್ ಶೆಟ್ಟಿಯವರು ಉಪಸ್ಥಿತರಿದ್ದರು.