
ಶಿವಮೊಗ್ಗ: ನಿನ್ನೆ ಶಿವಮೊಗ್ಗದಲ್ಲಿ ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಚಿವ ಬಿಜೆಪಿಯ ಹಿರಿಯ ಮುಖಂಡರಾದ ಕೆಎಸ್ ಈಶ್ವರಪ್ಪನವರು ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವರಾದ ಡಿ, ಕೆ ಶಿವಕುಮಾರ್ ಒಬ್ಬ ನೀರು ಕಳ್ಳ ಎಂದು ಹೇಳಿದ್ದರು.
ಇವರ ಈ ಹೇಳಿಕೆಯ ವಿರುದ್ಧ ಆಕ್ರೋಶಗೊಂಡಿರುವ ರಾಜ್ಯ ಕಾಂಗ್ರೇಸ್ ನ ರಾಜ್ಯ ಕಾರ್ಯದರ್ಶಿ ಕೆ ದೇವೇಂದ್ರಪ್ಪ ಇಂದು ಕಾಂಗ್ರೆಸ್ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಈಶ್ವರಪ್ಪನವರು ಮಾನಸಿಕ ಸ್ತಿಮಿತತೆ ಕಳೆದುಕೊಂಡಿದ್ದಾರೆ ಅವರಿಗೆ ಅವರ ಪಕ್ಷದಲ್ಲಿ ಏನು ಸ್ಥಾನ ಕೊಟ್ಟಿದ್ದಾರೆ ಎನ್ನುವುದು ಅವರಿಗೆ ಗೊತ್ತಿದೆ ಅವರು ಹಿರಿಯರಿದ್ದಾರೆ ಅರಿತುಕೊಂಡು ಮಾತನಾಡಬೇಕು.
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ನೀರಿನ ಕಳ್ಳ ಎಂದು ಸಂಭೋಧಿಸಿರುವುದು ಕಾಂಗ್ರೆಸ್ ಪಕ್ಷಕ್ಕೆ ಹಾಗೂ ಅವರ ಅಭಿಮಾನಿಗಳಿಗೆ ತೀವ್ರ ನೋವು ಉಂಟಾಗಿದೆ ಹೀಗಾಗಿ ಕೂಡಲೇ ಅವರು ಕ್ಷಮೆಯಾಚಿಸಬೇಕು ಇಲ್ಲವಾದರೆ ನಮ್ಮ ಹೋರಾಟ ಮುಂದುವರಿಯುತ್ತದೆ ಎನ್ನುವ ಎಚ್ಚರಿಕೆ ನೀಡಿದ್ದಾರೆ.
ಹಾಗೆ ಮುಂದುವರೆದು ಮಾತನಾಡುತ್ತಾ ಈಶ್ವರಪ್ಪನವರು ಹುಲಿಯ ಬಾಯಿಗೆ ಕೈಹಾಕಲು ಪ್ರಯತ್ನಿಸುತ್ತಿದ್ದಾರೆ ಇದು ಸರಿಯಲ್ಲ ಎಂದು ಪರೋಕ್ಷವಾಗಿ ಈಶ್ವರಪ್ಪನವರಿಗೆ ಡಿಕೆ ಶಿವಕುಮಾರ್ ಎದುರಿಸುವುದು ಅಷ್ಟು ಸುಲಭವಲ್ಲ ಎನ್ನುವ ಸಂದೇಶವನ್ನು ನೀಡಿದ್ದಾರೆ.
ರಘುರಾಜ್ ಹೆಚ್, ಕೆ.9449553305.