
ಬೆಂಗಳೂರು : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಸಚಿವರರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಮಧು ಬಂಗಾರಪ್ಪ ರವರು ಇಂದು ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಅತಿಥಿ ಶಿಕ್ಷಕರ ನೇಮಕಾತಿ, ಶಿಕ್ಷಕರ ನಿಯೋಜನೆ, ಶಿಕ್ಷಕರ ನೇಮಕಾತಿ (ಐದು ವರ್ಷಗಳ ಯೋಜನೆ), ಹೊಸ ಪ್ರೌಢಶಾಲೆ ಆರಂಭಿಸುವುದು, ಮಕ್ಕಳಿಗೆ ಪಠ್ಯಪುಸ್ತಕಗಳ ಹೊರೆ ಕಡಿಮೆ ಮಾಡುವುದು, ಶಾಲೆಗಳ ದುರಸ್ತಿಗೆ ಸಿಎಸ್ ಆರ್ ಅನುದಾನ ಬಳಕೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಈ ಸಂದರ್ಭದಲ್ಲಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್, ಆಯುಕ್ತರಾದ ಬಿಬಿ ಕಾವೇರಿ, ಎಸ್ ಎಸ್ ಕೆ ರಾಜ್ಯ ಯೋಜನಾ ನಿರ್ದೇಶಕರಾದ ರಮೇಶ್, ಇಲಾಖೆಯ ಪ್ರೌಢ ಶಿಕ್ಷಣ ವಿಭಾಗ ನಿರ್ದೇಶಕರಾದ ಕೃಷ್ಣಾಜೀ ಕರಿಚನ್ನಣ್ಣನವರ್, ಪ್ರಾಥಮಿಕ ಶಿಕ್ಷಣ ವಿಭಾಗದ ನಿರ್ದೇಶಕರಾದ ಪ್ರಸನ್ನ ಕುಮಾರ್ ಉಪಸ್ಥಿತರಿದ್ದರು.