
ಶಿವಮೊಗ್ಗ: ನಗರದ ಶಾಂತಿನಗರ ರಾಗಿಗುಡ್ಡ ಭಾಗದಲ್ಲಿ ಇಂದು ಬೆಳಗ್ಗಿನಿಂದ ಬೂದಿ ಮುಚ್ಚಿದ ಕೆಂಡದಂತಿದ್ದ ವಾತಾವರಣ ನಂತರ ಎಸ್ಪಿ ಸ್ಥಳಕ್ಕೆ ಭೇಟಿ ನೀಡಿದ ನಂತರ ವಾತಾವರಣವನ್ನು ತಿಳಿಗೊಳಿಸಿದ್ದರು.
ಆದರೆ ಸಂಜೆ ಮೆರವಣಿಗೆಯ ವೇಳೆಯಲ್ಲಿ ಕಲ್ಲುತುರಾಟ ನಡೆದು ಅನ್ಯ ಕೋಮಿನ ಕೆಲವರ ನಡುವೆ ಪರಸ್ಪರ ವಾಗ್ವಾದ ನಡೆದು ಒಂದಷ್ಟು ಜನಕ್ಕೆ ಗಾಯಗಳಾಗಿವೆ ಅದರಲ್ಲಿ ಪೊಲೀಸರು ಸಹ ಸೇರಿದ್ದಾರೆ.
ಕೂಡಲೇ ಸ್ಥಳದಲ್ಲಿ ಸೂಕ್ತ ಬಂದೋಬಸ್ತ್ ವ್ಯವಸ್ಥೆಯನ್ನು ಪೊಲೀಸ್ ಇಲಾಖೆ ಕಲ್ಪಿಸಿತು.ನಂತರ ಜಿಲ್ಲಾಧಿಕಾರಿಗಳು 144 ಸೆಕ್ಷನ್ ಜಾರಿ ಮಾಡಿ ಆದೇಶ ಹೊರಡಿಸಿದ್ದರು.
ಈ ಬಗ್ಗೆ ಸ್ಪಷ್ಟನೆ ನೀಡಿದ ಎಸ್ ಪಿ ಮಿಥುನ್ ಕುಮಾರ್ ಅವರು ಸ್ಥಳದಲ್ಲಿ ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಈಗಾಗಲೇ ಸ್ಥಳದಲ್ಲಿ ಜಿಲ್ಲಾಧಿಕಾರಿಗಳು 144 ಸೆಕ್ಷನ್ ಜಾರಿಗೊಳಿಸಿದ್ದು ಸೂಕ್ತ ಪೋಲಿಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದೆ ಈಗಾಗಲೇ ಈ ಘಟನೆಗೆ ಸಂಬಂಧಪಟ್ಟಂತೆ ಕೆಲವೊಂದು ವ್ಯಕ್ತಿಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ನಾಲ್ಕರಿಂದ ಐದು ಜನಕ್ಕೆ ಗಾಯಗಳಾಗಿವೆ ಉಳಿದಂತೆ ಯಾವುದೇ ರೀತಿಯ ಗಲಾಟೆಗಳು ನಡೆದಿಲ್ಲ ದಯವಿಟ್ಟು ಯಾರು ಸುಳ್ಳು ಸುದ್ದಿಗಳನ್ನು ಹಬ್ಬಿಸಬೇಡಿ ಎಂದು ಸ್ಪಷ್ಟನೆ ನೀಡಿದ್ದಾರೆ.
ಸ್ಥಳಕ್ಕೆ ಶಾಸಕರ ಭೇಟಿ ..!
ಸ್ಥಳಕ್ಕೆ ನಗರ ಶಾಸಕ ಚನ್ನಬಸಪ್ಪ ಭೇಟಿ ನೀಡಿದ್ದು ಎರಡು ಹಬ್ಬಗಳು ಶಾಂತ ರೀತಿಯಿಂದ ನಡೆದಿವೆ ಆದರೆ ರಾಗಿ ಗುಡ್ಡದಲ್ಲಿ ಕಳೆದ ಮೂರು ವರ್ಷಗಳಿಂದ ಇದೇ ತರದ ವಾತಾವರಣ ನಿರ್ಮಾಣವಾಗುತ್ತಿದೆ. ಕಟೌಟ್ ವಿಚಾರಕ್ಕೆ ಈ ಗಲಾಟೆ ನಡೆದಿದೆ ಆದರೆ ಹೊರಗಿನಿಂದ ಬಂದವರಿಂದ ಈ ವಾತಾವರಣ ಸೃಷ್ಟಿಯಾಗಿದೆ ಅವರನ್ನು ಬಿಡಬಾರದು ಅವರ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳಬೇಕು ಸದ್ಯ ಪರಿಸ್ಥಿತಿ ತಿಳಿಯಾಗಿದೆ ಯಾರು ಭಯಪಡುವ ಅಗತ್ಯತೆ ಇಲ್ಲ ಎಂದು ತಿಳಿಸಿದರು.
ರಘುರಾಜ್ ಹೆಚ್. ಕೆ..9449553305.