
ಬೆಂಗಳೂರು: ಪರಿಸರ ಸೂಕ್ಷ್ಮ ವಲಯಗಳನ್ನು ರಕ್ಷಿಸುವ ಮತ್ತು ಅಲ್ಲಿ ವಾಸಿಸುವ ಮೂಲ ಅತಿಕ್ರಮಣದಾರರಿಗೆ ಹಕ್ಕುಪತ್ರ ನೀಡುವ ಸಂಬಂಧ ಅಧಿಸೂಚನೆ ಹೊರಡಿಸುವ ಪ್ರಸ್ತಾವನೆಗಳನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ಇಂದು ನಡೆದ ಸಚಿವ ಸಂಪುಟದ ಉಪ ಸಮಿತಿ ಸಭೆಯಲ್ಲಿ ಮಹತ್ವದ ಚರ್ಚೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ದಿನೇಶ್ ಗುಂಡೂರಾವ್, ಕಂದಾಯ ಇಲಾಖೆ ಸಚಿವರಾದ ಕೃಷ್ಣ ಭೈರೇಗೌಡ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಉಪಸ್ಥಿತರಿದ್ದರು.