Tuesday, April 29, 2025
Google search engine
Homeಅಂತಾರಾಷ್ಟ್ರೀಯವಿಶ್ವ ದಾಖಲೆಯ ಸಾಗರದ ಸರದಾರನಿಗೆ ಡಾಕ್ಟರೇಟ್ ಗರಿ..!

ವಿಶ್ವ ದಾಖಲೆಯ ಸಾಗರದ ಸರದಾರನಿಗೆ ಡಾಕ್ಟರೇಟ್ ಗರಿ..!

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಾರ್ಗಲ್ ವಾಸಿಯಾದ ತಂದೆ ದಿವಂಗತ ಜೋಸೆಫ್ ಲೋಪಿಸ್ ಮತ್ತು ತಾಯಿ ಶ್ರೀಮತಿ ಸೌರಿನ್ ಲೋಪಿಸ್ ರವರ ಮಗನಾದ ಸ್ಟ್ಯಾನಿ ಲೋಪಿಸ್ ಕಾರ್ಗಲ್ ಇವರಿಗೆ

” ಏಷ್ಯಾ ಇಂಟರ್ನ್ಯಾಷನಲ್ ಕಲ್ಚರ್ ರಿಸರ್ಚ್ ಯೂನಿವರ್ಸಿಟಿ” ಯಿಂದ ” ಸಮಗ್ರ ಕಲೆ ಮತ್ತು ಸಾಹಿತ್ಯಕ್ಕೆ “
ಗೌರವ ಡಾಕ್ಟರೇಟ್ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ.

ತಮಿಳು ನಾಡಿನ ಹೊಸೂರಿನಲ್ಲಿ ನಡೆದ ಸಮಾರಂಭದಲ್ಲಿ ಶ್ರೀಯುತರಿಗೆ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದರು. ಶ್ರೀಯುತರು ಈ ಹಿಂದೆ ಬೆರಳಲ್ಲಿ ಕೋಲನ್ನು ಬ್ಯಾಲೆನ್ಸ್ ಮಾಡುವ ಮೂಲಕ ವಿಶ್ವ ದಾಖಲೆ ಹಾಗೂ ಕರ್ನಾಟಕ ಅಚೀವರ್ಸ ಬುಕ್ ಅವಾರ್ಡ್, ದಾಖಲೆಗಳನ್ನು ಮಾಡಿದ್ದರು. ಇಷ್ಟೇ ಅಲ್ಲದೆ ಇವರು ಮುಪ್ಪು , ದೃಷ್ಟಿ ಎಂಬ ಕಿರು ಚಿತ್ರವನ್ನು ನಿರ್ದೇಶನ ನಿರ್ಮಾಣ ಅಭಿನಯ ಮಾಡುವ ಮೂಲಕ ಹಲವು ಪ್ರಶಸ್ತಿಗಳನ್ನು ಸಹ ಪಡೆದಿದ್ದರು. ಇವರು ಬರೆದ ಹಲವು ಕವನಗಳು ಭಾವಗೀತೆ ಮತ್ತು ಭಕ್ತಿ ಗೀತೆಗಳಾಗಿವೆ ಹಾಗೂ ಇವರ ಹಲವು ಕಥೆಗಳು,ನಾಟಕಗಳು ಆಲ್ ಇಂಡಿಯಾ ರೇಡಿಯೋ ದಲ್ಲೂ ಸಹ ಪ್ರಸಾರವಾಗಿದೆ. ಇವರು ಹಲವು ಕಥೆ, ಮಕ್ಕಳ ಕಥೆ, ಕವನಸಂಕಲನ, ಕಾದಂಬರಿ, ಹಾಗೂ ಇನ್ನಿತರೆ ಪ್ರಕಾರದ ಪುಸ್ತಕಗಳನ್ನು ಬರೆದಿದ್ದಾರೆ. ರಾಜ್ಯ ಮಟ್ಟದ ಯುವಜನ ಮೇಳ ಏಕಪಾತ್ರಾಭಿನಯದಲ್ಲಿ ಪ್ರಥಮ ಸ್ಥಾನ ಸಹ ಪಡೆದಿದ್ದು. ಪ್ರಸ್ತುತ ಸಂತ ಜೋಸೆಫರ ಆಂಗ್ಲ ಮಾಧ್ಯಮ ಪ್ರೌಢಶಾಲೆ ಮಂಕಳಲೆ ಸಾಗರದಲ್ಲಿ ಕನ್ನಡ ಶಿಕ್ಷಕರಾಗಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಇವರಿಗೆ ಕರ್ನಾಟಕ ಸರ್ಕಾರದಿಂದ ” ಜಿಲ್ಲಾ ವೈಯಕ್ತಿಕ ಯುವ ಪ್ರಶಸ್ತಿ” ಸೇರಿದಂತೆ ಹಲವು ಪ್ರಶಸ್ತಿಗಳು ಲಭಿಸಿವೆ. ಸದಾ ಲವಲವಿಕೆಯಿಂದ ಕ್ರಿಯಾತ್ಮಕವಾಗಿ ಒಂದಲ್ಲ ಒಂದು ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಇವರು ಇನ್ನಷ್ಟು ಉತ್ತಮ ಸಾಧನೆ ಮಾಡಲಿ ಎಂದು ಶುಭ ಹಾರೈಸುತ್ತೇನೆ.

ಓಂಕಾರ ಎಸ್. ವಿ. ತಾಳಗುಪ್ಪ.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...