
ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ ಎಸ್ ಷಡಾಕ್ಷರಿ ಶಿವಮೊಗ್ಗದಿಂದ ಕೋಲಾರಕ್ಕೆ ವರ್ಗಾವಣೆಯಾಗಿದ್ದು. ಅಧೀಕೃತ ಆದೇಶ ಹೊರಡಿಸಲಾಗಿದೆ.
ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಶಿವಮೊಗ್ಗದ ಜಂಟಿ ನಿರ್ದೇಶಕರ ಕಚೇರಿಯಲ್ಲಿ ಲೆಕ್ಕಾಧೀಕ್ಷಕರಾಗಿದ್ದ ಷಡಾಕ್ಷರಿ ಅವರನ್ನು ಕೋಲಾರ ಜಿಲ್ಲೆಯಲ್ಲಿ ಖಾಲಿಯಿರುವ ಇರುವ ಸಮಾಜ ಕಲ್ಯಾಣ ಇಲಾಖೆಯ ಲೆಕ್ಕಾಧೀಕ್ಷಕರ ಹುದ್ದೆಗೆ ವರ್ಗಾವಣೆಗೊಳಿಸಲಾಗಿದೆ.