Tuesday, April 29, 2025
Google search engine
HomeಬೆಳಗಾವಿFree bicycle:ವಿದ್ಯಾರ್ಥಿಗಳಿಗೆ ಉಚಿತ ಬೈಸಿಕಲ್ ವಿತರಣೆ:ಮುಖ್ಯಮಂತ್ರಿಗಳೊಂದಿಗೆ ಚರ್ಚೆ: ಸಚಿವ ಮಧುಬಂಗಾರಪ್ಪ..!

Free bicycle:ವಿದ್ಯಾರ್ಥಿಗಳಿಗೆ ಉಚಿತ ಬೈಸಿಕಲ್ ವಿತರಣೆ:ಮುಖ್ಯಮಂತ್ರಿಗಳೊಂದಿಗೆ ಚರ್ಚೆ: ಸಚಿವ ಮಧುಬಂಗಾರಪ್ಪ..!

ಬೆಳಗಾವಿ:ಸರಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಉಚಿತ ಬೈಸಿಕಲ್ ವಿತರಣೆ ಕಾರ್ಯಕ್ರಮ ಆರಂಭಿಸುವುದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧುಬಂಗಾರಪ್ಪ ಅವರು ತಿಳಿಸಿದರು.
ವಿಧಾನಸಭೆಯಲ್ಲಿ ಸದಸ್ಯ ಪ್ರದೀಪ್ ಈಶ್ವರ್ ಅವರು ಕೇಳಿದ ಚುಕ್ಕೆಗುರುತಿನ ಪ್ರಶ್ನೆಗೆ ಅವರು ಉತ್ತರಿಸಿದರು.

ರಾಜ್ಯದಲ್ಲಿ ಈ ಹಿಂದೆ 2019-20ನೇ ಸಾಲಿನಲ್ಲಿ ಉಚಿತ ಬೈಸಿಕಲ್ ವಿತರಣೆ ಮಾಡಲಾಗಿರುತ್ತದೆ. ಪ್ರಸ್ತುತ ಸಾಲಿನಲ್ಲಿ ಸರಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಿಸಲಾಗುತ್ತಿಲ್ಲ. ಆದರೆ, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಶಾಲೆಗೆ ನಿರಂತರವಾಗಿ ಹಾಜರಾಗಲು ಅನುಕೂಲವಾಗುವಂತೆ ಸರಕಾರಿ ಬಸ್‍ಗಳಲ್ಲಿ ಪ್ರಯಾಣಿಸಲು ಉಚಿತವಾಗಿ ಬಸ್ ಪಾಸ್ ವಿತರಿಸಲಾಗುತ್ತಿದೆ.

ಸಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಕೇಂದ್ರ ಪ್ರಾಯೋಜಿತ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆ ಅಡಿಯಲ್ಲಿ ತಮ್ಮ ವ್ಯಾಪ್ತಿಯನ್ನು ಮೀರಿದ ಶಾಲೆಗಳಿಗೆ ಕ್ರಮಿಸಲು ಪ್ರತಿ ವಿದ್ಯಾರ್ಥಿಗೆ ಮಾಹೆಯಾನ 600 ರೂ.ಗಳಂತೆ ಆರು ತಿಂಗಳಿಂದ ಸಾರಿಗೆ ಭತ್ಯೆ ನೀಡಲಾಗುತ್ತಿದೆ ಎಂದರು.
ರಾಜ್ಯದಲ್ಲಿ 1ರಿಂದ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಸರಕಾರಿ ಶಾಲಾ ಮಕ್ಕಳಿಗೆ ವಿದ್ಯಾವಿಕಾಸ ಯೋಜನೆಯಡಿ ಒಂದು ಜೊತೆ ಶೂ ಮತ್ತು ಎರಡು ಜೊತೆ ಸಾಕ್ಸ್ ಉಚಿತವಾಗಿ ನೀಡಲಾಗುತ್ತಿದೆ ಎಂದರು.

2020-21ರಿಂದ 2022-23ನೇ ಸಾಲಿನವರೆಗೆ 7098 ಶಾಲೆಗಳಿಗೆ 9604 ಕೊಠಡಿಗಳ ನಿರ್ಮಾಣ ಹಾಗೂ ಇತರೆ ಕಾಮಗಾರಿಗಳಿಗೆ ಒಟ್ಟು 129768.90ಲಕ್ಷಗಳು ನಿಗದಿಯಾಗಿದ್ದು, ರೂ.9450.139 ಲಕ್ಷಗಳನ್ನು ಬಿಡುಗಡೆ ಮಾಡಿ ಕ್ರಮವಹಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರು ಸದಸ್ಯ ಯು.ಬಿ.ಬಣಕಾರ್ ಅವರ ಪ್ರಶ್ನೆಗೆ ಉತ್ತರಿಸಿದರು.

ಈ ಕೊಠಡಿಗಳ ನಿರ್ಮಾಣಕ್ಕೆ ಕೊರತೆ ಅನುದಾನವನ್ನು 2023-24ನೇ ಸಾಲಿನಲ್ಲಿ ಒದಗಿಸಲು ಕ್ರಮವಹಿಸಲಾಗಿದೆ. ಆಯವ್ಯಯದಲ್ಲಿ ಒದಗಿಸಲಾದ ಅನುದಾನ ಲಭ್ಯತೆ ಆಧರಿಸಿ ಅಗತ್ಯತೆಗೆ ಅನುಗುಣವಾಗಿ ಹಂತ-ಹಂತವಾಗಿ ರಾಜ್ಯಾದ್ಯಂತ ಶಾಲೆಗಳಲ್ಲಿ ಕೊಠಡಿ ನಿರ್ಮಾಣ ಮಾಡಲು ಅಗತ್ಯ ಕ್ರಮವಹಿಸಲಾಗುತ್ತಿದೆ ಎಂದರು.

ಮಲೆನಾಡು ಭಾಗದ ಎಲ್ಲ ಸರಕಾರಿ ನೌಕರರಿಗೆ 6ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸಿನ ಅನ್ವಯ ಗಿರಿತಾಣ ಭತ್ಯೆ ರದ್ದುಪಡಿಸಿ ಆದೇಶಿಸಿರುವುದರಿಂದ ಚಿಕ್ಕಮಗಳೂರು ಜಿಲ್ಲೆಯ ಗುಡ್ಡಗಾಡು ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರಿಗೆ ಸದ್ಯಕ್ಕೆ ಗಿರಿಭತ್ಯೆ ನೀಡುವ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಸದಸ್ಯ ನಯನಾ ಮೋಟಮ್ಮ ಅವರ ಪ್ರಶ್ನೆಗೆ ಸಚಿವ ಮಧುಬಂಗಾರಪ್ಪ ಅವರು ಉತ್ತರಿಸಿದರು.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...