Tuesday, April 29, 2025
Google search engine
Homeಬೆಳಗಾವಿವಿದ್ಯಾರ್ಥಿಗಳ ಹೋರಾಟಕ್ಕೆ ಕೊನೆಗೂ ಸಿಕ್ಕ ಜಯ ..!ಸರ್ಕಾರಿ ಉದ್ಯೋಗ ಸ್ಪರ್ಧಾತ್ಮಕ ಪರೀಕ್ಷೆ ಅಕ್ರಮ ತಡೆಗೆ ಶಾಸನ...

ವಿದ್ಯಾರ್ಥಿಗಳ ಹೋರಾಟಕ್ಕೆ ಕೊನೆಗೂ ಸಿಕ್ಕ ಜಯ ..!ಸರ್ಕಾರಿ ಉದ್ಯೋಗ ಸ್ಪರ್ಧಾತ್ಮಕ ಪರೀಕ್ಷೆ ಅಕ್ರಮ ತಡೆಗೆ ಶಾಸನ ವಿಧೇಯಕ ಮಂಡನೆ- ನ್ಯಾಯಕ್ಕೆ ಸಂದ ಜಯ – ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್‍.ಪಿ.ಗಿರೀಶ್..!

ಸರ್ಕಾರಿ ಉದ್ಯೋಗಕ್ಕೆ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಕ್ರಮ ನಡೆಸುವವರಿಗೆ 10 ವರ್ಷಗಳವರೆಗೆ ಜೈಲು ಶಿಕ್ಷೆ, 10 ಕೋಟಿ ರೂ.ವರೆಗೆ ದಂಡ ವಿಧಿಸಲು ಅವಕಾಶ ಕಲ್ಪಿಸುವ ವಿಧೇಯಕವನ್ನು ನಿನ್ನೆ ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಕಾಂಗ್ರೆಸ್ ಸರ್ಕಾರ ಮಂಡಿಸಿದೆ

ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪರವಾಗಿ ಸಚಿವರಾ ದ ಪ್ರಿಯಾಂಕ ಖರ್ಗೆ ಅವರು, ಕರ್ನಾಟಕ ಸಾರ್ವಜನಿಕ ಪರೀಕ್ಷೆ (ನೇಮಕಾತಿಯಲ್ಲಿನ ಭ್ರಷ್ಟಾಚಾರ ಮತ್ತು ಅನುಚಿತ ವಿಧಾನಗಳ ಪ್ರತಿಬಂಧಕ ಕ್ರಮಗಳು) ವಿಧೇಯಕ-2023 ಅನ್ನು ಮಂಡಿಸಿದರು. ಪರೀಕ್ಷಾ ಅಕ್ರಮ ನಡೆಸಿದವರ ಸ್ವತ್ತು ಮುಟ್ಟುಗೋಲು ಹಾಕಿಕೊಳ್ಳಲು ಹಾಗೂ ಅಂತಹ ಅಪರಾಧಗಳ ವಿಚಾರಣೆಗಾಗಿ ನ್ಯಾಯಾಲಯಗಳನ್ನು ಸ್ಥಾಪಿಸಲು ವಿಧೇಯಕ ಅವಕಾಶ ಕಲ್ಪಿಸಲಿದೆ.

ಸ್ವಾಯತ್ತ ಸಂಸ್ಥೆಗಳು, ಪ್ರಾಧಿಕಾರಗಳು, ಮಂಡಳಿಗಳು ಅಥವಾ ನಿಗಮ ಒಳಗೊಂಡಂತೆ ರಾಜ್ಯ ಸರ್ಕಾರದ ಯಾವುದೇ ಹುದ್ದೆಗೆ ನೇಮಕಾತಿ ಉದ್ದೇಶಕ್ಕಾಗಿ ನಡೆಸಲಾಗುವ ಪಬ್ಲಿಕ್ ಪರೀಕ್ಷೆಗಳಲ್ಲಿ ಅನುಚಿತ ವಿಧಾನ ಬಳಸುವುದನ್ನು ಪ್ರತಿಬಂಧಿಸಲು ಮತ್ತು ತಡೆಗಟ್ಟಲು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಲು ಈ ವಿಧೇಯಕದಲ್ಲಿ ಪ್ರಸ್ತಾಪಿಸಲಾಗಿದೆ.

ಯಾವುದೇ ವ್ಯಕ್ತಿಯು ಅನುಚಿತ ವಿಧಾನದಲ್ಲಿ ತೊಡಗಿದರೆ ಆ ವ್ಯಕ್ತಿಗೆ 5 ವರ್ಷ ಹಾಗೂ ವಿಸ್ತರಿಸಬಹುದಾದ ಜೈಲು ಶಿಕ್ಷೆ ವಿಧಿಸಬಹುದು. ಪರೀಕ್ಷೆಯಲ್ಲಿ ಒಳಸಂಚು ಹಾಗೂ ನಿಯಮ ಉಲ್ಲಂಘಿಸಿದವರಿಗೆ 8 ವರ್ಷದಿಂದ 12 ವರ್ಷದವರೆಗೆ ವಿಸ್ತರಿಸಬಹುದಾದ ಜೈಲು ಶಿಕ್ಷೆ ಹಾಗೂ 15 ಲಕ್ಷ ರೂ.ನಿಂದ 15 ಕೋಟಿ ರೂ.ವರೆಗೆ ದಂಡ ವಿಧಿಸಬಹುದು. ಇನ್ನು ಅಕ್ರಮ ಸಾಬೀತಾದರೆ ಆರೋಪಿಯಿಂದಲೇ ಪರೀಕ್ಷೆಗೆ ಸಂಬಂಧಪಟ್ಟ ಎಲ್ಲ ಖರ್ಚು ಮತ್ತು ವೆಚ್ಚ ಭರಿಸಲು ಅವಕಾಶ ಕಲ್ಪಿಸಲಾಗಿದೆ.

ಕೆಪಿಎಸ್‌ಸಿ, ಕೆಇಎ, ಪ್ರಾಧಿಕಾರ ಹಾಗೂ ನೇಮಕಾತಿ ಸಮಿತಿಯ ಮೂಲಕ ನಡೆಸುವ ಪರೀಕ್ಷೆ, ವಿಶ್ವವಿದ್ಯಾಲಯ ನಡೆಸುವ ಯಾವುದೇ ನೇಮಕಾತಿ ಪರೀಕ್ಷೆ ಅಕ್ರಮದಲ್ಲಿ ಪಾಲ್ಗೊಂಡ ಯಾವುದೇ ಪ್ರಭಾವಿತ ವ್ಯಕ್ತಿಯಾದರೂ ಆತನಿಗೆ ಕಾನೂನಿನ ಮುಖಾಂತರ ಶಿಕ್ಷಿಸಲು ಒಂದು ಉತ್ತಮವಾದ ವಿಧೇಯಕವನ್ನು ಸರ್ಕಾರ ಮಂಡಿಸುವ ಮುಖಾಂತರ ಪ್ರತಿಭಾವಂತ ಲಕ್ಷಾಂತರ ವಿದ್ಯಾರ್ಥಿಗಳ ಹೋರಾಟಕ್ಕೆ ನ್ಯಾಯವನ್ನು ಕೊಡಿಸುವಂತಹ ಕೆಲಸವನ್ನು ಮಾಡಿ ನುಡಿದಂತೆ ನಡೆದ ಸರ್ಕಾರವಾಗಿದೆ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್ ಪಿ ಗಿರೀಶ್ ಹರ್ಷ ವ್ಯಕ್ತಪಡಿಸಿದ್ದಾರೆ.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...