Wednesday, April 30, 2025
Google search engine
Homeರಾಜ್ಯಪೊಲೀಸ್ ಇಲಾಖೆ ಪರ ಯತ್ನಾಳ್ ಬ್ಯಾಟಿಂಗ್ ಸಚಿವ ಕೃಷ್ಣಭೈರೇಗೌಡ ರಿಂದ ಪೊಲೀಸರಿಗೆ ಗುಡ್ ನ್ಯೂಸ್..!

ಪೊಲೀಸ್ ಇಲಾಖೆ ಪರ ಯತ್ನಾಳ್ ಬ್ಯಾಟಿಂಗ್ ಸಚಿವ ಕೃಷ್ಣಭೈರೇಗೌಡ ರಿಂದ ಪೊಲೀಸರಿಗೆ ಗುಡ್ ನ್ಯೂಸ್..!

ಬೆಳಗಾವಿ: ಪೋಲೀಸ್ ಇನ್ಸ್ಪೆಕ್ಟರ್ ಹಾಗೂ ಸಬ್ ಇನ್ಸ್ಪೆಕ್ಟರ್ ಗಳ ‍ ವರ್ಗಾವಣೆಯ ಅವಧಿಯನ್ನು ಒಂದು ವರ್ಷದ ಬದಲಾಗಿ 2 ವರ್ಷಕ್ಕೆ ಹೆಚ್ಚಿಸುವ ಮನವಿಯನ್ನು ಸರ್ಕಾರ ಸಕಾರಾತ್ಮಕವಾಗಿ ಪರಿಶೀಲಿಸುತ್ತಿದ್ದು, ಕ್ರಮವಹಿಸಲಿದೆ.

ಪೋಲೀಸ್ ಸಿಬ್ಬಂದಿಗಳ ಪತಿ-ಪತ್ನಿ ಪ್ರಕರಣಗಳಲ್ಲಿ ಅಂತರ ಜಿಲ್ಲಾ ವರ್ಗಾವಣೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ವಿಧಾನಸಭೆಯಲ್ಲಿಂದು ಶೂನ್ಯ ವೇಳೆಯಲ್ಲಿ ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರಿಸಿದರು.

ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರು ಶೂನ್ಯ ವೇಳೆಯಲ್ಲಿ ಮಾತನಾಡಿ, ಪೋಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಸೇವೆ ಸಲ್ಲಿಸುವ ಸ್ಥಳದಲ್ಲಿ ಒಂದು ವರ್ಷದ ಸೇವಾ ಅವಕಾಶವನ್ನು ನೀಡಲಾಗಿದೆ. ಅಪರಾಧ ಪ್ರಕರಣಗಳ ಪತ್ತೆ ಹಾಗೂ ಅಪರಾಧಿಗಳನ್ನು ಗುರುತಿಸಿ ಕ್ರಮವಹಿಸುವಲ್ಲಿ ಈ ಒಂದು ವರ್ಷ ಸಿಬ್ಬಂದಿಗಳಿಗೆ ಸಾಕಾಗುವುದಿಲ್ಲ. ಅವರ ಪರಿಣಾಮಕಾರಿ ಕರ್ತವ್ಯಕ್ಕೆ ಅನುಕೂಲವಾಗಲು ಕನಿಷ್ಠ ಎರಡು ವರ್ಷಗಳವರೆಗೆ ವರ್ಗಾವಣೆಯಿಂದ ವಿನಾಯಿತಿ ನೀಡಬೇಕು. ಈ ಕುರಿತು ಪೋಲೀಸ್ ಇಲಾಖೆ ನಿಯಮಗಳಿಗೆ ತಿದ್ದುಪಡಿ ತರಬೇಕೆಂದು ಅವರು ಆಗ್ರಹಿಸಿದರು.

ಇದಕ್ಕೆ ಗೃಹ ಸಚಿವರ ಪರವಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಉತ್ತರಿಸಿ, ಈ ಕುರಿತು ಸರ್ಕಾರವು ಸಕಾರಾತ್ಮಕವಾಗಿ ಸ್ಪಂದಿಸುತ್ತದೆ ಮತ್ತು ಪತಿ-ಪತ್ನಿ ಪ್ರಕರಣಗಳಲ್ಲಿ ಅಂತರ ಜಿಲ್ಲಾ ವರ್ಗಾವಣೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...