
ಶಿವಮೊಗ್ಗ: ನಗರದ ಫ್ರೀಡಂ ಪಾರ್ಕ್ ನಲ್ಲಿ ಗಾರೆ ಕೆಲಸ ಮಾಡುತ್ತಿದ್ದ ಶಶಿ ಎಂಬುವನ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದ್ದು ಹೊಟ್ಟೆಯ ಭಾಗ ಹೊರಗೆ ಬಂದಿದೆ.
ಓಲಂಗಾ ಹಾಗೂ ನೇಪಾಳಿ ಮಂಜುನಾಥ್ ಗ್ಯಾಂಗ್ ಕಡೆಯಿಂದ ಹಲ್ಲೆ ನಡೆದಿದೆ ಎನ್ನಲಾಗುತ್ತಿದ್ದು ಹಳೆ ದ್ವೇಷದ ಹಿನ್ನೆಲೆಯಲ್ಲಿ ಈ ಹಲ್ಲೆ ನಡೆದಿದೆ ಎನ್ನಲಾಗಿದೆ.
ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ಶಶಿ ಭವಿಷ್ಯ ಬದುಕುಳಿಯುವುದು ಕಷ್ಟ.
ಜಯನಗರ ವ್ಯಾಪ್ತಿಯಲ್ಲಿ ಬರುವ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಆರೋಪಿಗಳ ಪತ್ತೆಗಾಗಿ ಬಲೆಬೀಸಿದ್ದಾರೆ.
