
ಬೆಂಗಳೂರು:ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮಹತ್ವದ ತೀರ್ಪನ್ನು ನೀಡಿದ್ದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ 6.96 ಕೋಟಿ ರೂ. ದಂಡವನ್ನು ವಿಧಿಸಿ ಆದೇಶಿಸಿದೆ.
ಏನಿದು ಪ್ರಕರಣ:
2011ರ ಚೆಕ್‌ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು 6.96 ಕೋಟಿ ರೂ. ದಂಡವನ್ನು ವಿಧಿಸಿ ಆದೇಶಿಸಿದೆಯಲ್ಲದೆ, ಒಂದು ವೇಳೆ ದಂಡ ಪಾವತಿ ಮಾಡದಿದ್ದರೆ 6 ತಿಂಗಳು ಜೈಲುವಾಸದ ಶಿಕ್ಷೆಯನ್ನು ನೀಡಿ ಆದೇಶಿಸಿದೆ
ರಾಜೇಶ್ ಎಕ್ಸ್ ಪೋರ್ಟ್ ಸಂಸ್ಥೆಗೆ 6.60 ಕೋಟಿ ರೂಪಾಯಿ ಮೌಲ್ಯದ ಚಕ್ ಒಂದನ್ನು ಆಕಾಶ್ ಆಡಿಯೋ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಮಧು ಬಂಗಾರಪ್ಪ ಅವರು ನೀಡಿದ್ದರು. ಆದರೆ ಚೆಕ್‌ಬೌನ್ಸ್ ಆಗಿತ್ತು. ವಿಚಾರಣೆ ಮಾಡಿದರೆ ಮಧು ಬಂಗಾರಪ್ಪ ಉಡಾಫೆಯಾಗಿ ವರ್ತಿಸಿದ ಹಿನ್ನಲೆಯಲ್ಲಿ ಚೆಕ್‌ಬೌನ್ಸ್ ಪ್ರಕರಣವನ್ನು ದಾಖಲು ಮಾಡಲಾಗಿತ್ತು.
ಈ ಪ್ರಕರಣದ ಅರ್ಜಿಯನ್ನು ವಿಚಾರಣೆ ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಹಾಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ 6,96,70,000 ರೂ. (6.96 ಕೋಟಿ ರೂ.) ದಂಡವನ್ನು ವಿಧಿಸಿದೆ.
ಆದರೆ ಜ.30 ರೊಳಗೆ 6.10 ಲಕ್ಷ ಪಾವತಿಸುವುದಾಗಿ ಮಧು ಬಂಗಾರಪ್ಪ ಮುಚ್ಚಳಿಕೆ ಬರೆದುಕೊಟ್ಟಿದ್ದರು. ಆದರೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮುಚ್ಚಳಿಕೆ ಒಪ್ಪಲು ನಿರಾಕರಿಸಿತ್ತು.
ಯಾಕೆಂದರೆ ಈ ಹಿಂದೆಯೂ ಮಧು ಬಂಗಾರಪ್ಪ ನೀಡಿದ್ದ ಮುಚ್ಚಳಿಕೆ ಪಾಲಿಸಿಲ್ಲ ಎಂದು ಮಾನ್ಯ ನ್ಯಾಯಾಧೀಶರಾದ ಜೆ.ಪ್ರೀತ್ ಮನವಿ ತಿರಸ್ಕರಿಸಿ ಆದೇಶ ಹೊರಡಿಸಿದ್ದರು.
ದಂಡದ ಹಣದಲ್ಲಿ 6,96,60,000 ರೂ. ಹಣವನ್ನು ದೂರುದಾರರಿಗೆ ಪರಿಹಾರವಾಗಿ ನೀಡಬೇಕು ಮತ್ತು ಉಳಿದ 10 ಸಾವಿರ ರೂ. ಹಣವನ್ನು ಸರ್ಕಾರಕ್ಕೆ ದಂಡವಾಗಿ ಪಾವತಿಸಬೇಕು ಎಂದು ಮಹತ್ವದ ಆದೇಶ ಹೊರಡಿಸಿದೆ.