Home ರಾಜ್ಯಶ್ರೀಕಾಂತ್ ಪೂಜಾರಿ ಬಂಧಿಸದೆ ಬಿಟ್ಟರೆ ಶ್ರೀರಾಮಚಂದ್ರನು ಕ್ಷಮಿಸಲಾರ ಮುಖ್ಯಮಂತ್ರಿ ಸಿದ್ದರಾಮಯ್ಯ..!

ಶ್ರೀಕಾಂತ್ ಪೂಜಾರಿ ಬಂಧಿಸದೆ ಬಿಟ್ಟರೆ ಶ್ರೀರಾಮಚಂದ್ರನು ಕ್ಷಮಿಸಲಾರ ಮುಖ್ಯಮಂತ್ರಿ ಸಿದ್ದರಾಮಯ್ಯ..!

by EDITOR NEWS WARRIORS
0 comments

ಹುಬ್ಬಳ್ಳಿ: 1992ರಲ್ಲಿ ಹುಬ್ಬಳ್ಳಿಯಲ್ಲಿ ನಡೆದಿದ್ದ ರಾಮ ಜನ್ಮ ಭೂಮಿ ಹೋರಾಟದ ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರಾಜ್ಯ ಬಿಜೆಪಿ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಮಭಕ್ತ, ಕರಸೇವಕ ಎಂದು ಸಮಾಜದೆದುರು ನಕಲಿ ವೇಷ ತೊಟ್ಟು ಮೆರೆಯುವ ಶ್ರೀಕಾಂತ ಪೂಜಾರಿ ಕಾನೂನಿನ ದೃಷ್ಟಿಯಲ್ಲಿ ಒಬ್ಬ ಸಮಾಜಘಾತುಕ ವ್ಯಕ್ತಿ. ತನ್ನ ಅಪರಾಧ ಕೃತ್ಯಗಳಿಂದ ರಕ್ಷಣೆ ಸಿಗಲಿ ಎಂಬ ಕಾರಣಕ್ಕೆ ಧರ್ಮರಕ್ಷಣೆ ನಾಟಕವಾಡುವ ಇಂಥವರನ್ನು ಬಂಧಿಸದೆ, ರಾಜಾರೋಷವಾಗಿ ತಿರುಗಾಡಲು ಬಿಟ್ಟರೆ ಶ್ರೀರಾಮಚಂದ್ರನೂ ಕ್ಷಮಿಸಲಾರ ಎಂದಿದ್ದಾರೆ.

ಅಕ್ರಮ ಸಾರಾಯಿ ಮಾರಾಟ, ದೊಂಬಿ, ಮಟಕಾ, ಜೂಜಾಟ ಮುಂತಾದ 16 ಸಮಾಜ ಘಾತುಕ ಕೃತ್ಯಗಳಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿರುವ ವ್ಯಕ್ತಿಯ ಪರವಾಗಿ ಪ್ರತಿಭಟನೆ ನಡೆಸುತ್ತಿರುವ ರಾಜ್ಯ ಬಿಜೆಪಿ ನಾಯಕರು ಈತನ ಎಲ್ಲಾ ಅಪರಾಧ ಕೃತ್ಯಗಳಿಗೆ ತಮ್ಮ ಪಕ್ಷದ ಬೆಂಬಲವಿದೆ ಎಂಬುದನ್ನು ಬಹಿರಂಗವಾಗಿ ಹೇಳಲಿ ಅಥವಾ ಪ್ರತಿಭಟನೆ ಕೈಬಿಟ್ಟು ಸಾರ್ವಜನಿಕವಾಗಿ ಕ್ಷಮೆ ಕೋರಲಿ ಎಂದು ಒತ್ತಾಯಿಸಿದ್ದಾರೆ.

ಕಳೆದ 2023ನೇ ಸಾಲಿನಲ್ಲಿ ಹುಬ್ಬಳ್ಳಿ – ಧಾರವಾಡ ಕಮಿಷನರೇಟ್ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ, ಕಳ್ಳತನ, ಸುಲಿಗೆ, ವಂಚನೆ, ದೊಂಬಿ ಮುಂತಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದಂತೆ ಎಲ್.ಪಿ.ಸಿ ( ಕಾನೂನು ವಿಚಾರಣಾ ಪ್ರಮಾಣಪತ್ರ ) ಪ್ರಕರಣಗಳಲ್ಲಿ ಒಟ್ಟು 36 ಜನರನ್ನು ದಸ್ತಗಿರಿ ಮಾಡಲಾಗಿದೆ. ಇದರಲ್ಲಿ ಶ್ರೀಕಾಂತ ಪೂಜಾರಿ 32ನೆಯ ವ್ಯಕ್ತಿ. ಈತನನ್ನು ಕರಸೇವಕನೆಂಬ ಕಾರಣಕ್ಕೆ ಹೊರಗಡೆ ಬಿಡಬೇಕೋ? ಅಥವಾ ಆರೋಪಿ ಎಂಬ ಕಾರಣಕ್ಕೆ ಬಂಧಿಸಬೇಕೋ?ಎಂದು ಕೇಳಿದ್ದಾರೆ.


ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿರುವುದು ನಮ್ಮ ಸರ್ಕಾರದ ವಿರುದ್ಧವಲ್ಲ, ದೇಶದ ಕಾನೂನು ಮತ್ತು ಸಂವಿಧಾನದ ವಿರುದ್ಧ. ಅಪರಾಧ ಕೃತ್ಯಗಳಲ್ಲಿ ತೊಡಗುವವರು ಧರ್ಮರಕ್ಷಕರು ಎಂದು ಹೇಳಿಕೊಂಡು ಕೊಲೆ, ಸುಲಿಗೆಗಳಿಗೆ ಇಳಿದರೆ ಅದನ್ನೂ ಬಿಜೆಪಿ ನಾಯಕರು ಬೆಂಬಲಿಸುತ್ತಾರೆಯೇ? ಎಂದು ಪ್ರಶ್ನಿಸಿದ್ದಾರೆ.

ರಾಮಮಂದಿರದ ಉದ್ಘಾಟನೆ ವೇಳೆ ಶ್ರೀಕಾಂತ ಪೂಜಾರಿಯ ಬಂಧನವಾಗಿರುವುದು ಕಾಕತಾಳೀಯ ಅಷ್ಟೆ. ಹಳೆಯ ಪ್ರಕರಣಗಳನ್ನು ಪರಿಶೀಲನೆ ನಡೆಸುವ ವೇಳೆ ಪೊಲೀಸರು ಇತರೆ 36 ಜನರ ಜೊತೆಗೆ ಇವರನ್ನು ಕೂಡ ಬಂಧಿಸಿದ್ದಾರೆ. ಇದರಲ್ಲಿ ಪ್ರತೀಕಾರವೂ ಇಲ್ಲ, ತುಷ್ಟೀಕರಣವೂ ಇಲ್ಲ. ಕಾನೂನು ಪಾಲನೆ ಮಾಡಬೇಕು, ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...