
ಬೆಂಗಳೂರು: ನಿನ್ನೆ ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ನಡೆದ ಹಿರಿಯ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ಪೊಲೀಸರಿಗೆ ಸಿಹಿ ಸುದ್ದಿ ನೀಡಿದ್ದಾರೆ.
ಮುಖ್ಯಮಂತ್ರಿ ಮಾತನಾಡುತ್ತಾ,ಪೊಲೀಸರಿಗೆ ನಮ್ಮ ಸರ್ಕಾರ ಸಂಪೂರ್ಣ ಫ್ರೀ ಹ್ಯಾಂಡ್ ಕೊಟ್ಟಿದೆ. ಪೊಲೀಸರ ಕೆಲಸದಲ್ಲಿ ಮೂಗು ತೂರಿಸಬಾರದು ಎನ್ನುವುದು ನನ್ನ ಬದ್ಧತೆ. ಆದರೆ ನಾವು ಫ್ರೀ ಹ್ಯಾಂಡ್ ಕೊಟ್ಟಿದ್ದು ದುರುಪಯೋಗ ಆಗಬಾರದು. ಅದು ಜನರಿಗೆ ಅನುಕೂಲ ಆಗುವಂತಿರಬೇಕು. ನಮ್ಮದು ಜಾತ್ಯತೀತ ರಾಷ್ಟ್ರ. ನಾವುಗಳೇ ನಮ್ಮ ಸಂವಿಧಾನದ ಆಶಯಗಳನ್ನು ಬಲಪಡಿಸಬೇಕು ಶೋಷಣೆಗೆ ಒಳಗಾದವರಿಗೆ ವ್ಯವಸ್ಥೆ ಮೇಲೆ ನಂಬಿಕೆ ಬರಬೇಕಾದರೆ ದೌರ್ಜನ್ಯ ಪ್ರಕರಣಗಳ ತನಿಖೆಯ ಗುಣಮಟ್ಡ ಹೆಚ್ಚಾಗಬೇಕು. ವೈಜ್ಞಾನಿಕವಾಗಿ ಸಮರ್ಥ ಆರೋಪ ಪಟ್ಟಿ ಸಲ್ಲಿಕೆಯಾಗಬೇಕು ಎಂದು ತುಂಬಾ ಭಾಷಣದಲ್ಲಿ ತಿಳಿಸಿದ್ದಾರೆ.
ಪೊಲೀಸ್ ಇಲಾಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಪಂಚ ಘೋಷಣೆಗಳು :
- ರಾಜ್ಯದಲ್ಲಿ ಭವ್ಯವಾದ ಸುಸಜ್ಜಿತ ಸುವರ್ಣ ಪೊಲೀಸ್ ಭವನ ನಿರ್ಮಾಣ. ಇದಕ್ಕಾಗಿ ಬಜೆಟ್ ನಲ್ಲಿ ಹಣ ನಿಗದಿ.
- ರಾಜ್ಯದ ಎಲ್ಲಾ ಪೊಲೀಸ್ ಸಿಬ್ಬಂದಿಗೆ ಬೆಳ್ಳಿ ಪದಕ ವಿತರಣೆ.
- ರಾಜ್ಯದ ಎಲ್ಲಾ ಪೊಲೀಸರ ವೈದ್ಯಕೀಯ ವೆಚ್ಚ ರೂ,1,000 ದಿಂದ 1,500 ರೂ.ಗೆ ಹೆಚ್ಚಳ.
- CEN ಠಾಣಾಧಿಕಾರಿಗಳ ಹುದ್ದೆಯನ್ನು ACP ಮತ್ತು DCP ಮಟ್ಟಕ್ಕೆ ಉನ್ನತೀಕರಣ ಮಾಡುವುದು.
- ಬೆಂಗಳೂರು ನಗರದಲ್ಲಿ 8 ಅಡಿಷನಲ್ DCP ಹುದ್ದೆಗಳನ್ನು ಹೆಚ್ಚುವರಿಯಾಗಿ ಸೃಜಿಸುವುದು ಸೇರಿದಂತೆ,
- ಕರ್ನಾಟಕ ರಾಜ್ಯವನ್ನು ಡ್ರಗ್ ಮುಕ್ತ ಗೊಳಿಸುವ ದಿಕ್ಕಿನಲ್ಲಿ ಪರಿಣಾಮಕಾರಿ ಕ್ರಮ ಕೈಗೊಳ್ಳುವುದು.
- ಹೀಗೆ ಬಹು ಮುಖ್ಯ ಪಂಚ ಘೋಷಣೆಗಳನ್ನು ಮುಖ್ಯಮಂತ್ರಿ ಮಾಡಿದ್ದು ಘೋಷಣೆಗಳು ಘೋಷಣೆಗಳಾಗಿ ಉಳಿಯುತ್ತವೆಯೋ..? ಅಥವಾ ಅಧಿಕಾರದ ಅವಧಿಯಲ್ಲಿ ಕಾರ್ಯರೂಪಕ್ಕೆ ಬರುತ್ತಾ ಕಾದುನೋಡಬೇಕು.