Wednesday, April 30, 2025
Google search engine
Homeರಾಜ್ಯBig news: NPS/OPS ಆಯ್ಕೆ ನೌಕರರದ್ದು..! ಏನಿದು ಸರ್ಕಾರದ ಆದೇಶ..?

Big news: NPS/OPS ಆಯ್ಕೆ ನೌಕರರದ್ದು..! ಏನಿದು ಸರ್ಕಾರದ ಆದೇಶ..?

ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಯಾಗಿದ್ದ ಓ ಪಿ ಎಸ್ (OPS) ಜಾರಿಯ ಬಗ್ಗೆ ಕರ್ನಾಟಕ ಸರ್ಕಾರ ಮಹತ್ವದ ಆದೇಶ ಹೊರಡಿಸಿದ್ದು ಈ ಆದೇಶದ ಪ್ರಕಾರ ದಿನಾಂಕ 1.4.2006 ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆಯಾಗಿ ಆ ದಿನಾಂಕದಂದು ಅಥವಾ ನಂತರದಲ್ಲಿ ರಾಜ್ಯ ಸರ್ಕಾರಿ ಸೇವೆಗೆ ಸೇರಿದ ನೌಕರರನ್ನು ಹಳೇಯ ಪಿಂಚಣಿ ಯೋಜನೆಗೆ ಒಳಪಡಿಸಲು ಸರ್ಕಾರ ಅನುಮತಿ ನೀಡಿ ಆದೇಶ ಹೊರಡಿಸಿದೆ.


ರಾಜ್ಯ ಸಿವಿಲ್ ಸೇವೆಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗಾಗಿ ಹೊರಡಿಸಿದ ನೇಮಕಾತಿ ಅಧಿಸೂಚನೆಗಳ ಮೇರೆಗೆ ಆಯ್ಕೆ ಹೊಂದಿ ದಿನಾಂಕ: 01.04.2006ರಂದು ಅಥವಾ ಆ ದಿನಾಂಕದ ನಂತರ ಸೇವೆಗೆ ಸೇರಿರುವ ಕಾರಣದಿಂದ ನೂತನ ಕೊಡುಗೆ ಯೋಜನೆಯ (ರಾಷ್ಟ್ರೀಯ ಪಿಂಚಣಿ ಯೋಜನೆ) ವ್ಯಾಪ್ತಿಗೊಳಪಟ್ಟಿರುವ ಸರ್ಕಾರಿ ನೌಕರರನ್ನು ಸರ್ಕಾರವು ಅವರ ಒಪ್ಪಿಗೆ ಮೇರೆಗೆ ಕೆಳಕಂಡ ಷರತ್ತುಗಳಿಗೊಳಪಟ್ಟು ಒಂದು ಬಾರಿಗೆ ಕ್ರಮವಾಗಿ ಹಿಂದಿನ ಪಿಂಚಣಿ ಯೋಜನೆಯ ವ್ಯಾಪ್ತಿಗೊಳಪಡಿಸಬಹುದು ಎಂದು ಆದೇಶ ನೀಡಿದೆ.

ಷರತ್ತುಗಳೇನು..?


ಸರ್ಕಾರಿ ನೌಕರರು ಹಿಂದಿನ ಪಿಂಚಣಿ ಯೋಜನೆಗೊಳಪಡಲು ಇಚ್ಛಿಸಿದಲ್ಲಿ ತಮ್ಮ ಒಪ್ಪಿಗೆಯನ್ನು ಸರ್ಕಾರ ಹೊರಡಿಸಿರುವ ನಿಗಧಿತ ನಮೂನೆಯಲ್ಲಿ ದಿನಾಂಕ: 20.06.2024ರೊಳಗೆ ಸಕ್ಷಮ ನೇಮಕಾತಿ ಪ್ರಾಧಿಕಾರಕ್ಕೆ, ನೇರವಾಗಿ ಸಲ್ಲಿಸತಕ್ಕದ್ದು, ಆದರೆ ಒಂದು ಬಾರಿಗೆ ಮಾತ್ರ ಈ ಅವಕಾಶ ಚಲಾಯಿಸಲು ಅವಕಾಶವಿರುತ್ತದೆ. ಒಂದು ಬಾರಿ ಮಾಡಿಕೊಂಡ ಆಯ್ಕೆಯನ್ನು ಬದಲಾಯಿಸಲು ಅವಕಾಶವಿಲ್ಲ ಎಂದು ಷರತ್ತು ವಿಧಿಸಲಾಗಿದೆ.


ಆಯ್ಕೆಯನ್ನು ಚಲಾಯಿಸಲು ಅರ್ಹ ಸರ್ಕಾರಿ ನೌಕರರು ನಿಗಧಿತ ದಿನಾಂಕದೊಳಗೆ ತಮ್ಮ ಆಯ್ಕೆಯನ್ನು ಚಲಾಯಿಸದೇ ಇದ್ದಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆಯಲ್ಲಿ ಮುಂದುವರೆಯುತ್ತಾರೆ. ನೌಕರರ ಆಯ್ಕೆಗನುಸಾರವಾಗಿ ಅವರು ಹಿಂದಿನ ಪಿಂಚಣಿ ಯೋಜನೆಗೊಳಪಡಲು ನಿಗಧಿತ ಅರ್ಹತೆಯನ್ನು ಹೊಂದಿರುವುದನ್ನು ಸಕ್ಷಮ ನೇಮಕಾತಿ ಪ್ರಾಧಿಕಾರವು ಖಚಿತಪಡಿಸಿಕೊಂಡು ದಿನಾಂಕ 31.07.2024 ರೊಳಗಾಗಿ ಅಂತಹ ನೌಕರರನ್ನು ಹಿಂದಿನ ಪಿಂಚಣಿ ಯೋಜನೆಗೊಳಪಡಿಸಲು ಶಿಫಾರಸ್ಸಿನೊಂದಿಗೆ ಇಲಾಖಾ ಮುಖ್ಯಸ್ಮರಿಗೆ ಕ್ರೋಢೀಕೃತ ಪ್ರಸ್ತಾವನೆಯನ್ನು ಸಲ್ಲಿಸತಕ್ಕದ್ದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...