Wednesday, April 30, 2025
Google search engine
Homeತೀರ್ಥಹಳ್ಳಿThirthalli: ಭಾರತದ ಸಂವಿಧಾನ ಜಾರಿಗೆ ಬಂದ 75 ವರ್ಷದ ನಿಮ್ಮಿತ ಸಂವಿಧಾನ ಜಾಗೃತಿ ಜಾಥಾ..!

Thirthalli: ಭಾರತದ ಸಂವಿಧಾನ ಜಾರಿಗೆ ಬಂದ 75 ವರ್ಷದ ನಿಮ್ಮಿತ ಸಂವಿಧಾನ ಜಾಗೃತಿ ಜಾಥಾ..!

ಭಾರತ ಸಂವಿಧಾನ ಜಾರಿಗೆ ಬಂದ 75 ವರ್ಷದ ನಿಮಿತ್ತ ಸಂವಿಧಾನ ಜಾಗೃತಿ ಜಾಥಾ ಯಾತ್ರೆಯು ಇಂದು  ಸಂಜೆ 6-00 ಗಂಟೆಗೆ ಮೇಗರವಳ್ಳಿ ಗ್ರಾಮ ಪಂಚಾಯಿತಿಗೆ ಆಗಮಿಸಿದ್ದು ಜಾಗೃತಿ ಜಾಥಾ ವಾಹನವನ್ನು ಆರಳಿಕಟ್ಟೆ ಸರ್ಕಲ್ ನಿಂದ ಬಲೂನ್ ಮತ್ತು ಕ್ಯಾಂಡಲ್ ಹಾಗೂ ಪೂರ್ಣ ಕುಂಭ ಸ್ವಾಗತದೊಂದಿಗೆ ಜಾಥಾ ಹಾಗೂ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿಯವರು ವಿವಿಧ ಶಾಲೆಗಳ ಮಕ್ಕಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಸದಸ್ಯರು ಅಂಗನವಾಡಿ ಆಶಾ ಕಾರ್ಯಕರ್ತೆಯರು ವಿವಿಧ ಶಾಲೆಯ ಶಿಕ್ಷಕರು ಸಾರ್ವಜನಿಕರು ವಿವಿಧ ಇಲಾಖೆ ಅಧಿಕಾರಿಗಳು ಒಳಗೊಂಡಂತೆ ಸ.ಹಿ.ಪ್ರಾಥಮಿಕ ಶಾಲಾ ಆವರಣದಲ್ಲಿ ಜಾಥದೊಂದಿಗೆ ಸ್ವಾಗತಿಸಲಾಯಿತು.

ಈ ಕಾರ್ಯಕ್ರಮದ ಪ್ರಯುಕ್ತ ಶಾಲೆಗಳಲ್ಲಿ ಶಾಲಾ ಮಕ್ಕಳಿಗೆ ಮತ್ತು ಮಹಿಳೆಯರಿಗೆ ರಂಗೋಲಿ ಸ್ಪರ್ಧೆ ಏರ್ಪಡಿಸಲಾಯಿತು. ಹಾಗೂ ವೇದಿಕೆ ಕಾರ್ಯಕ್ರಮದಲ್ಲಿ ಡಾ/ ಬಿ,ಆರ್ ಅಂಬೇಡ್ಕರ್ ಮತ್ತು ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ ಜ್ಯೋತಿ ಬೆಳಗುವುದರೊಂದಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ  ಎಂ.ಎಸ್. ದೇವೇಂದ್ರ ಇವರು ಕಾರ್ಯಕ್ರಮ ಉದ್ಘಾಟಿಸಿದರು.

ಕಾರ್ಯಕ್ರಮಕ್ಕೆ ಆಗಮಿಸಿರುವ ಸರ್ವರನ್ನು ಪಿಡಿಒ ಶ್ರೀಮತಿ ಭಾರತಿ ಎಂ. ಇವರು ಸ್ವಾಗತಿಸಿದರು. ಪ್ರಾಸ್ತಾವಿಕವಾಗಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ರೀಮತಿ ಆಶಾಲತಾ ಇವರು ಸಂವಿಧಾನದ ಕುರಿತು ಪ್ರಾಸ್ತಾವಿಕ ನುಡಿಗಳನಾಡಿದರು.

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮೇಗರವಳ್ಳಿ ಶಾಲಾ ಮಕ್ಕಳು ದೇಶಭಕ್ತಿ ಗೀತೆಯನ್ನು ಹಾಡಿದರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ಬಾಳೆಬೈಲ್ ಪದವಿ ವಿದ್ಯಾರ್ಥಿನಿ ಕು// ದೀಪ್ತಿ ಮೇಗರವಳ್ಳಿ ಗನವಳ್ಳಿ, ಇವರು ಸಂವಿಧಾನ ಕುರಿತು ಉಪನ್ಯಾಸ ನೀಡಿದರು ಹಾಗೂ ಕಾರ್ಯಕ್ರಮದಲ್ಲಿ ಸಂವಿಧಾನ ಪೀಠಿಕೆ ಮತ್ತು ಪ್ರಸ್ತಾವನೆಯ ಪ್ರತಿಜ್ಞಾವಿಧಿ ಭೋದಿಸಲಾಯಿತು. 

ಕ್ಷೇತ್ರಶಿಕ್ಷಣಾಧಿಕಾರಿಗಳು, ಮತ್ತು ತಾಲ್ಲೂಕು ನೊಡೆಲ್ ಅಧಿಕಾರಿ ಶ್ರೀ ಸಂತೋಷರವರು ಹಾಗೂ ಮೇಗರವಳ್ಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಶ್ರೀಮತಿ ಪ್ರತೀಮಾ ಕೆ.ಎಸ್.ಪುಟ್ಟಪ್ಪ, ಸದಸ್ಯರಾದ  ಜಿ.ಕೆ.ಶ್ರೀನಿವಾಸ,  ಅಜೀತ್ ಅಣ್ಣುವಳ್ಳಿ,  ನವಿನ್ ತೊಟದ ಮನೆ, ಶ್ರೀಮತಿ ಪಾರ್ವತಿ ರವಿ ಶ್ರೀಮತಿ ಲಕ್ಷ್ಮೀ ನರಸಿಂಹ, ಶ್ರೀಮತಿ ಜೀನತ್ ಭಾನು, SDMS ಅಧ್ಯಕ್ಷರುಗಳಾದ  ವೆಂಕಟೇಶ್ ಹೆಗ್ಡೆ,  ಮಹೇಶ‍್ ಮತ್ತು ಶಾಲಾ ಮುಖ್ಯೋಪಾಧ್ಯಾಯರು , ಹಾಗೂ ಸಹ ಶಿಕ್ಷಕರು ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಒಕ್ಕೂಟದ ಸದಸ್ಯರು, ಶಾಲಾ ಮಕ್ಕಳು, ಪೋಷಕರು, ಗ್ರಾಮಸ್ಥರು ಗ್ರಾಮ ಪಂಚಾಯಿತಿ ಸಿಬ್ಬಂಧಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮದ ವಂದನಾರ್ಪಣೆ ಶ್ರೀಮತಿ  ರಾಜೇಶರವರು ಇವರು ನೆರವೇರಿಸಿದರು. ಪಿಡಿಒ ಶ್ರೀಮತಿ ಭಾರತಿ ಎಂ ಇವರು ಪೂರ್ಣ ಕಾರ್ಯಕ್ರಮವನ್ನು ನಿರೂಪಣೆ ನಡೆಸಿ ಕಾರ್ಯಕ್ರಮ ಮುಕ್ತಾಯಗೊಳಿಸಿದರು.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...