
ದಾವಣಗೆರೆ>>ಜಿಲ್ಲೆಯ ಕೇಂದ್ರ ಸ್ಥಾನ ಹಾಗೂ ತಾಲ್ಲೂಕು ಕೇಂದ್ರಗಳಾದ ಹರಿಹರ, ಹೊನ್ನಾಳಿ, ಚನ್ನಗಿರಿ ಮತ್ತು ಜಗಳೂರುಗಳಲ್ಲಿ ಸಂಚಾರ ನಿಯಮಗಳ ಉಲ್ಲಂಘನೆ ತಡೆಗಟ್ಟಲು ಟ್ರಾಫಿಕ್ ಮ್ಯಾನೆಜ್‍ಮೆಂಟ್ ಸೆಲ್ ಅನ್ನು ತೆರೆಯಲಾಗಿದ್ದು.
ಸಾರ್ವಜನಿಕರು ಸ್ವಯಂ ಪ್ರೇರಣೆಯಿಂದ ದೂರು ದಾಖಲಿಸಬಹುದು:
ದಾವಣಗೆರೆಯ ಪೊಲೀಸ್ ಉಪ ವಿಭಾಗ ಕಚೇರಿಯಲ್ಲಿ ಟ್ರಾಫಿಕ್ ಮ್ಯಾನೆಜ್‍ಮೆಂಟ್ ಸೆಲ್ ತೆರೆಯಲಾಗಿದೆ.
ಈ ವ್ಯವಸ್ಥೆಯಲ್ಲಿ ಸಂಚಾರ ನಿಯಮಗಳ ಉಲ್ಲಂಘನೆ ಪ್ರಕರಣಗಳನ್ನು ಹೆಚ್ಚು ಗುರುತಿಸಲು ಸಾಧ್ಯವಾಗಲಿದೆ. ನಿಯಮ ಉಲ್ಲಂಘನೆ ಪ್ರಕರಣಗಳನ್ನು ಕಡಿಮೆ ಮಾಡಲು ಪೊಲೀಸರೊಂದಿಗೆ ಸಾರ್ವಜನಿಕರು ಕೂಡ ಪಾಲ್ಗೊಳ್ಳುವ ನೂತನ ವ್ಯವಸ್ಥೆ ಇದಾಗಿದೆ. ಸಾರ್ವಜನಿಕರು ಸ್ವಯಂ ಪ್ರೇರಣೆಯಿಂದ ಸಂಚಾರ ನಿಯಮಗಳ ಉಲ್ಲಂಘನೆಯನ್ನು ತಡೆಗಟ್ಟುವಲ್ಲಿ ಟ್ರಾಫಿಕ್ ಮ್ಯಾನೆಜ್‍ಮೆಂಟ್ ವ್ಯವಸ್ಥೆಯಲ್ಲಿ ಅವಕಾಶ ಕಲ್ಪಿಸಲಾಗಿದೆ.
ಸಾರ್ವಜನಿಕರು www.davangerepolice.karnataka.gov.in ವೆಬ್‍ಸೈಟ್‍ಗೆ ಭೇಟಿ ನೀಡಿ ಪರಿಚಯ ಕಲಂನಲ್ಲಿ ವಾಹನ ಸವಾರರ ತಪ್ಪುಗಳ ಬಗ್ಗೆ ಸಾರ್ವಜನಿಕರ ಕಣ್ಗಾವಲು ವ್ಯವಸ್ಥೆ ಎಂಬ ಶಿರ್ಷಿಕೆಯಡಿಯಲ್ಲಿರುವ ಲಿಂಕನ್ನು ಬಳಸಿ ದೂರು ದಾಖಲಿಸಬಹುದು. ಸಂಚಾರ ನಿಯಮಗಳ ಉಲ್ಲಂಘನೆ ಪ್ರಕರಣ ನಡೆದಾಗ ಸ್ಥಳದಲ್ಲಿಯೇ ಪೊಟೋ ತೆಗೆದು ಜೊತೆಗೆ ಲಿಂಕ್‌ನಲ್ಲಿ ಕೇಳಲಾಗುವ ಮಾಹಿತಿಯನ್ನು ನೀಡುವ ಮೂಲಕ ಸಾರ್ವಜನಿಕರು ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳನ್ನು ಈ ನೂತನ ವ್ಯವಸ್ಥೆಯಲ್ಲಿ ಜಿಲ್ಲಾ ಪೊಲೀಸರಿಗೆ ವರದಿ ಮಾಡಬಹುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್ ತಿಳಿಸಿದ್ದಾರೆ.
ಈ ನೂತನ ಪ್ರಯೋಗ ಜಿಲ್ಲೆಯಲ್ಲಿ ಯಶಸ್ವಿಯಾಗುತ್ತಾ ಕಾದುನೋಡಬೇಕು..
ವರದಿ …ರಘುರಾಜ್ ಹೆಚ್ ..ಕೆ…
ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ..9449553305/7892830899…