
ಶಿವಮೊಗ್ಗ: ಇಂದು ಸರ್ಕಾರಿ ನೌಕರರ ಭವನದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿ ಪತ್ರಿಕಾಗೋಷ್ಠಿಯಲ್ಲಿ ನಡೆಸಿ ಮಾತನಾಡುತ್ತಾ ಬೆಂಗಳೂರಿನಲ್ಲಿ ನಡೆಯುವ ಮಹಾಸಮ್ಮೇಳನದ ಬಗ್ಗೆ ಮಾಹಿತಿ ನೀಡಿದರು.
ಫೆಬ್ರವರಿ 27ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಸರ್ಕಾರಿ ನೌಕರರ ಮಹಾಸಮ್ಮೇಳನ ನಡೆಯಲಿದೆ.ಈ ಮಹಾ ಸಮ್ಮೇಳನದಲ್ಲಿ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ರಾಜ್ಯ ಸರ್ಕಾರದ ಮಂತ್ರಿಗಳು ಪಾಲ್ಗೊಳ್ಳಲಿದ್ದಾರೆ.
ಈ ಸಮ್ಮೇಳನದಲ್ಲಿ ,
*)ಹಳೆ ಪಿಂಚಣಿ ಯೋಜನೆ ಮರು ಜಾರಿಗೆ ಆಗ್ರಹ ಮಾಡಲಾಗುವುದು .
*)7ನೇ ವೇತನ ಆಯೋಗದ ವರದಿಯ ಅನುಷ್ಠಾನಕ್ಕೆ ಆಗ್ರಹ.
*)ಆರೋಗ್ಯ ಸಂಜೀವಿನಿ ಯೋಜನೆ ಲೋಕಾರ್ಪಣೆಗೆ ಆಗ್ರಹಿಸಲಾಗುವುದು.
ರಾಜ್ಯದಾದ್ಯಂತ ಎರಡೂವರೆ ಲಕ್ಷ ಹೆಚ್ಚು ಎನ್ ಪಿ ಎಸ್ ನೌಕರರು ಓಪಿಎಸ್ ಜಾರಿಗೆಆಗ್ರಹಿಸುತ್ತಿದ್ದಾರೆ.ಈಗಾಗಲೇ ರಾಜ್ಯಾದ್ಯಂತ ವಿವಿಧ ಇಲಾಖೆಗಳಲ್ಲಿ ಎರಡುವರೆ ಲಕ್ಷ ಸರ್ಕಾರಿ ನೌಕರರ ಹುದ್ದೆ ಖಾಲಿ ಇದೆ.ಇದರಿಂದ ರಾಜ್ಯ ಸರ್ಕಾರಕ್ಕೆ 10,000 ಕೋಟಿ ಹಣ ಉಳಿತಾಯವಾಗುತ್ತಿದೆ.ಇದೇ ಹಣದಲ್ಲಿ ನಮಗೆ ಸೌಲಭ್ಯ ಕಲ್ಪಿಸಲು ಆಗ್ರಹಿಸುತ್ತಿದ್ದೇವೆ.ಛತ್ತೀಸ್ಗಡ, ಪಂಜಾಬ್ ಮೊದಲಾದ ರಾಜ್ಯಗಳಲ್ಲಿ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸಲಾಗಿದೆ.ಅದೇ ಮಾದರಿಯಲ್ಲಿ ಕರ್ನಾಟಕದಲ್ಲಿ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸಲು ಆಗ್ರಹಿಸುತ್ತಿದ್ದೇವೆ.
ಅಲ್ಲದೆ ಕಳೆದ 15 ವರ್ಷಗಳಿಂದ ಖಾಲಿ ಬಿದ್ದ ಹುದ್ದೆಗಳ ಭರ್ತಿಗೆ ಆಗ್ರಹಿಸುತ್ತೇಲೇ ಬಂದಿದ್ದೇವೆಆದರೆ ಹಂತ ಹಂತವಾಗಿ ಸರ್ಕಾರಿ ನೌಕರರ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆಬೆಂಗಳೂರಿನಲ್ಲಿ ನಡೆಯುವ ಮಹಾ ಸಮ್ಮೇಳದ ಸಂದರ್ಭದಲ್ಲಿ ರಾಜ್ಯ ಸರ್ಕಾರಿ ನೌಕರರು ತಮ್ಮ ಸಂಘಟನೆಯ ಪ್ರದರ್ಶನ ಮಾಡಲಿದ್ದಾರೆ.
ಈ ಸಂದರ್ಭದಲ್ಲಿ ಸಂಘಟನೆಯು ಪ್ರಮುಖರು ಹಾಜರಿದ್ದರು.