ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗ ಇವರು ಪ್ರತಿ ವರ್ಷದಂತೆ ಈ ವರ್ಷವೂ ಪ್ರಗತಿಪರ ರೈತ ಮಹಿಳೆ ಪ್ರಶಸ್ತಿ ನೀಡಿ ಗೌರವಿಸಲು ನಿರ್ಧರಿಸಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಸಮಗ್ರತೆಯನ್ನು ಅಳವಡಿಸಿಕೊಂಡು ಪ್ರಗತಿಯತ್ತ ಸಾಗುತ್ತಿರುವ ರೈತರನ್ನು ವಿಶ್ವವಿದ್ಯಾಲಯ ವ್ಯಾಪ್ತಿಯ ಪ್ರತಿ ಜಿಲ್ಲೆಗೆ ಒಬ್ಬರಂತೆ ಗುರುತಿಸಿ 2021 ರ ಕೃಷಿ ಮೇಳದಂದು ಪ್ರಶಸ್ತಿ ನೀಡಲಾಗುವುದು. ಈ ನಿಟ್ಟಿನಲ್ಲಿ ವಿಶ್ವವಿದ್ಯಾಲಯ ವ್ಯಾಪ್ತಿಯ ಏಳು ಜಿಲ್ಲೆಗಳಾದ ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ ಮತ್ತು ಕೊಡಗಿನ ರೈತ ಮಹಿಳೆಯರು ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:
ಆಯ್ಕೆ ಮಾಡಲು ಕೃಷಿ ಕಸುಬು ಹಾಗೂ ಇತರೆ ಎಲ್ಲಾ ಉಪ ಕಸುಬುಗಳನ್ನು ಗಣನೆಗೆ ತೆಗೆದುಕೊಂಡು ಇಡೀ ಕೃಷಿ ಕ್ಷೇತ್ರವನ್ನು ಒಂದು ಘಟಕವಾಗಿ ಪರಿಗಣಿಸಿ ಸಮಗ್ರ ಕೃಷಿ ತತ್ವಗಳನ್ನಾಧರಿಸಿ ಪ್ರಗತಿ ಸಾಧಿಸಿದ ಕೃಷಿಕರನ್ನು ಗುರುತಿಸಲಾಗುವುದು. ಅರ್ಜಿ ಸಲ್ಲಿಸಿದ ಪ್ರತಿ ಜಿಲ್ಲೆಯಿಂದ ಒಬ್ಬ ರೈತರನ್ನು ಗುರುತಿಸಲಾಗುವುದು.
ಅರ್ಜಿ ಸಲ್ಲಿಸಲು ಆಸಕ್ತ ರೈತರು/ರೈತ ಮಹಿಳೆ ಆಯಾ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರ ಕಚೇರಿ, ಕೃಷಿ ವಿಜ್ಞಾನ ಕೇಂದ್ರಗಳು ಅಥವಾ ವಿಸ್ತರಣಾ ಶಿಕ್ಷಣ ಘಟಕಗಳಲ್ಲಿ ಅರ್ಜಿ ಪಡೆಯಬಹುದು ಅಥವಾ ವೆಬ್‍ಸೈಟ್ https://www.uahs.edu.in/ ನಲ್ಲಿ ಅರ್ಜಿ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಸೆಪ್ಟೆಂಬರ್ 24 ರೊಳಗೆ ತಲುಪುವಂತೆ ಆಯಾ ಕೃಷಿ ಜಂಟಿ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ಆಯಾ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರು ಅಥವಾ ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥರು ಕೃಷಿ ವಿಜ್ಞಾನ ಕೇಂದ್ರ, ಮೊ.ಸಂ: ಶಿವಮೊಗ್ಗ 9480838976, 8277932600, ದಾವಣಗೆರೆ 9480838209, ಚಿಕ್ಕಮಗಳೂರು 9480838203, 8277930890, ಉಡುಪಿ 9480838202, 8277932500, ಚಿತ್ರದುರ್ಗ 9480838201, ದಕ್ಷಿಣ ಕನ್ನಡ 8794706468, 8277931060, ಮಡಿಕೇರಿ 9480838210, 7259005540 ನ್ನು ಸಂಪರ್ಕಿಸಬಹುದೆಂದು ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ವಿಸ್ತರಣಾ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ..
ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ…9449553305/7892830899…