
ಸುಜ್ಞಾನ ಪೀಠ ಸಾಹಿತ್ಯ ಕಲಾ ಸಂಸ್ಥೆ ಸದಾ ಕನ್ನಡ ನಾಡು, ನುಡಿ ಸಾಹಿತ್ಯ, ಸಂಸ್ಕೃತಿಯನ್ನು ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ಹಲವಾರು ಕಾರ್ಯಕ್ರಮಗಳನ್ನು ಮಾಡುತ್ತಾ, ಕವಿ ಸಾಹಿತಿಗಳಿಗೆ ವೇದಿಕೆ ನೀಡುವ ಸದುದ್ದೇಶದಿಂದ ಕವಿಗೋಷ್ಠಿ, ಸಾಹಿತ್ಯಗೋಷ್ಠಿ ಕಾರ್ಯಕ್ರಮಗಳನ್ನು ಆಯೋಜಿಸಿದೆ.

ನಾಡಿನ ಮಹಾನ್ ಸಾಧಕರನ್ನು ಗುರುತಿಸಿ ರಾಜ್ಯ ಮಟ್ಟದ ಪ್ರಶಸ್ತಿ ಪುರಸ್ಕಾರ ನೀಡಿರುತ್ತದೆ. ಕಳೆದ ವರ್ಷ ಮೊದಲ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಯಾಗಿ ನಿರ್ವಹಿಸಿದ ಕೀರ್ತಿಗೆ ಪಾತ್ರವಾಗಿರುವ ಈ ಸಂಸ್ಥೆ ಈ ಬಾರಿ ಧಾರವಾಡದಲ್ಲಿ ಎರಡನೇ ಸಾಹಿತ್ಯ ಸಮ್ಮೇಳನ ಆಯೋಜನೆ ಮಾಡಲಾಗಿದ್ದು, ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಡಾ. ಮಂಜುಳಾ ಪಾವಗಡ ರವರು ಸಮ್ಮೇಳನದ ಅಧ್ಯಕ್ಷತೆ ವಹಿಸಲಿದ್ದು, ಕಾರ್ಯಕ್ರಮದಲ್ಲಿ ಹಲವಾರು ಕವಿಗಳು, ಸಾಹಿತಿಗಳು ಭಾಗವಹಿಸಲಿದ್ದಾರೆ ಎಂದು ಸುಜ್ಞಾನ ಪೀಠ ಸಂಸ್ಥೆಯ ಅಧ್ಯಕ್ಷ ನಾಗರಾಜ್ ತಂಬ್ರಹಳ್ಳಿ ಪತ್ರಿಕಾ ಪ್ರಕಟಣೆ ಮೂಲಕ ಈ ಸಮ್ಮೇಳನಕ್ಕೆ ಸರ್ವರನ್ನು ಆತ್ಮೀಯವಾಗಿ ಆಮಂತ್ರಿಸಿದ್ದಾರೆ.