
ನೈರುತ್ಯ ಪದವೀಧರ ಕ್ಷೇತ್ರದ ಪ್ರಬಲ ಆಕಾಂಕ್ಷಿಗಳಾಗಿದ್ದ ಎಸ್ಪಿ ದಿನೇಶ್ ಹಾಗೂ ರಂಗಸ್ವಾಮಿ ಅವರು ನಾಳೆ ಪತ್ರಿಕಾಗೋಷ್ಠಿಯನ್ನು ಇಟ್ಟುಕೊಂಡಿದ್ದು ಅದು ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ.
ಈಗಾಗಲೇ ನೈರುತ್ಯ ಪದವೀಧರ ಕ್ಷೇತ್ರದ ಟಿಕೆಟ್ ಆಯನೂರು ಮಂಜುನಾಥ್ ಅವರಿಗೆ ಫೈನಲ್ ಆಗಿದ್ದು ಅವರು ಪತ್ರಿಕಾಗೋಷ್ಠಿಯಲ್ಲಿ ಎಲ್ಲರ ವಿಶ್ವಾಸಕ್ಕೆ ತೆಗೆದುಕೊಂಡು ನಾನು ಚುನಾವಣೆಯಲ್ಲಿ ಗೆದ್ದು ಬರುತ್ತೇನೆ ಇಷ್ಟು ವರ್ಷ ಬಿಜೆಪಿಗೆ ಮೀಸಲಾಗಿದ್ದ ಆ ಕ್ಷೇತ್ರವನ್ನು ಕಾಂಗ್ರೆಸ್ ಗೆ ತರುವುದು ಸವಾಲಿನ ಕೆಲಸ ಅದನ್ನು ನಾನು ಖಂಡಿತ ಮಾಡುತ್ತೇನೆ ಇದಕ್ಕೆ ಎಲ್ಲರ ಸಹಕಾರ ಅತ್ಯಗತ್ಯ ಎಂದು ಹೇಳಿದ್ದರು.
ಇದಕ್ಕೂ ಮೊದಲು ಎಸ್ಪಿ ದಿನೇಶ್ ಆಯನೂರ್ ಮಂಜುನಾಥ್ ಅವರಿಗೆ ಟಿಕೆಟ್ ನೀಡಬಾರದು ನಾನು ಪ್ರಬಲ ಆಕಾಂಕ್ಷಿ ನನಗೆ ಟಿಕೆಟ್ ನೀಡಬೇಕು ಎಂದು ತಮ್ಮ ಬೆಂಬಲಿಗರೊಡನೆ ಹಲವು ಬಾರಿ ಪತ್ರಿಕಾಗೋಷ್ಠಿ ನಡೆಸಿದ್ದರು.
ಆದರೆ ಇವೆಲ್ಲ ಗೊಂದಲಕ್ಕೆ ತೆರೆ ಎಳೆದ ಕಾಂಗ್ರೆಸ್ ಪಕ್ಷ ಕೊನೆಗೂ ಆಯನೂರ್ ಮಂಜುನಾಥ್ ಗೆ ಮಣೆ ಹಾಕಿದ್ದು ಅವರಿಗೆ ಟಿಕೆಟ್ ನೀಡುವುದರ ಮೂಲಕ ಈ ಗೊಂದಲಕ್ಕೆ ತೆರೆ ಎಳೆದಿತ್ತು.
ಆದರೆ ಈಗ ಪ್ರಬಲ ಆಕಾಂಕ್ಷಿಗಳಾಗಿದ್ದ ರಂಗಸ್ವಾಮಿ ಹಾಗೂ ಎಸ್ ಪಿ ದಿನೇಶ್ ಅವರು ನಾಳೆ ಜಂಟಿ ಪತ್ರಿಕಾಗೋಷ್ಠಿ ನಡೆಸುತ್ತಿರುವುದು ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ ಏಕೆಂದರೆ ಈ ಪತ್ರಿಕಾಗೋಷ್ಠಿಯಲ್ಲಿ ಅವರು ಈಗಾಗಲೇ ಟಿಕೆಟ್ ಘೋಷಣೆಯಾಗಿರುವ ಆಯನೂರು ಮಂಜುನಾಥ್ ಅವರಿಗೆ ತಮ್ಮ ಬೆಂಬಲ ನೀಡುತ್ತಾರೋ ಅಥವಾ ತಮ್ಮ ಅಸಮಾಧಾನವನ್ನು ಹೊರ ಹಾಕುತ್ತಾರೋ ಕಾದುನೋಡಬೇಕಾಗಿದೆ.