
ಇಂದು ಸಂಜೆ 4.00 ಗಂಟೆಗೆ ಬೆಂಗಳೂರು ವಿಜಯನಗರದ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಕಾವೇರಿ ನಮ್ಮ ಹಕ್ಕು.. ಕಾವೇರಿ ಹೋರಾಟ ಕ್ರಿಯಾ ಸಮಿತಿ ಬೆಂಗಳೂರು ಆಯೋಜಿಸಲಾಗಿದ್ದ ಚಿಂತನಾ ಸಭೆಯಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ದಿವ್ಯ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.
ಈ ಕಾರ್ಯಕ್ರಮದಲ್ಲಿ ಪೂಜ್ಯ ಶ್ರೀ ಶ್ರೀ ಸೌಮ್ಯನಾಥ ಸ್ವಾಮೀಜಿಯವರು, ಜಸ್ಟೀಸ್ ಶ್ರೀ ಗೋಪಾಲಗೌಡ ಅವರು, ಜಸ್ಟೀಸ್ ನಾಗಮೋಹನದಾಸ್ ಅವರು, ಕಾವೇರಿ ನಮ್ಮ ಹಕ್ಕು.. ಕಾವೇರಿ ಹೋರಾಟ ಕ್ರಿಯಾ ಸಮಿತಿಯ ಸದಸ್ಯರು ಹಾಗೂ ಗಣ್ಯರು ಉಪಸ್ಥಿತರಿದ್ದರು.