
ಜಿಲ್ಲಾ ಕಾಂಗ್ರೆಸ್ ಸಮಿತಿಯ ಹಲವು ಘಟಕಗಳಿಗೆ ಪಕ್ಷದ ಸಂಘಟನೆಯ ದೃಷ್ಟಿಯಿಂದ ವಿವಿಧ ಅಧ್ಯಕ್ಷರುಗಳನ್ನು ಉಪಾಧ್ಯಕ್ಷರುಗಳನ್ನು ನೇಮಿಸಿ ಆದೇಶ ಹೊರಡಿಸುತ್ತಿದೆ .
ಚುನಾವಣೆ ಹೊತ್ತಿನಲ್ಲಿ ಈ ನೇಮಕಾತಿಗಳು ಬಹು ಪ್ರಾಮುಖ್ಯತೆಯನ್ನು ಪಡೆದುಕೊಳ್ಳುತ್ತಿದ್ದು ಜಿಲ್ಲಾಧ್ಯಕ್ಷರಾದ ಎಚ್ ಎಸ್ ಸುಂದರೇಶ್ ರವರು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ಸಿನ ಪ್ರಪ್ರಥಮ ಮಹಿಳಾ ಉಪಾಧ್ಯಕ್ಷರನ್ನಾಗಿ ಶ್ರೀಮತಿ ಸೌಗಂಧಿಕ ರಘುನಾಥ್ ಅವರನ್ನು ಆಯ್ಕೆ ಮಾಡಿದ್ದಾರೆ.
ಸೌಗಂಧಿಕಾ ರಂಗನಾಥ್ ಅವರು ಮಹಿಳಾ ಸಂಘಟನೆಯಲ್ಲಿ ಹೆಚ್ಚಿನ ಶ್ರಮವಹಿಸಿ ಪಕ್ಷದ ಸಂಘಟನೆಯಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.