Home ಬೆಂಗಳೂರುವಾರ್ತಾ ಇಲಾಖೆಗೆ ನೂತನ ಆಯುಕ್ತರಾಗಿ ಸೂರಳ್ಕರ್ ವಿಕಾಸ್ ಕಿಶೋರ್‌ ನೇಮಕ ..!

ವಾರ್ತಾ ಇಲಾಖೆಗೆ ನೂತನ ಆಯುಕ್ತರಾಗಿ ಸೂರಳ್ಕರ್ ವಿಕಾಸ್ ಕಿಶೋರ್‌ ನೇಮಕ ..!

by EDITOR NEWS WARRIORS
0 comments



ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ‌ಇಲಾಖೆಯ ನೂತನ ಆಯುಕ್ತರಾಗಿ 2012ರ ಐಎಎಸ್‌ ಬ್ಯಾಚ್ ನ ಸೂರಳ್ಕರ್ ವಿಕಾಸ್ ಕಿಶೋರ್ ಅವರನ್ನು ನೇಮಿಸಿ ಸರಕಾರ ಆದೇಶ ಹೊರಡಿಸಿದೆ.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿರ್ಗಮಿತ ಆಯುಕ್ತ ಹೇಮಂತ್ ನಿಂಬಾಳ್ಕರ್ ಅವರು ನೂತನ ಆಯುಕ್ತ ಸೂರಳ್ಕರ್ ವಿಕಾಸ್ ಕಿಶೋರ್ ಅವರಿಗೆ ಶನಿವಾರ ಸಂಜೆ ಅಧಿಕಾರ ಹಸ್ತಾಂತರಿಸಿದರು.


ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಆರೋಗ್ಯ ವಿಭಾಗದ ವಿಶೇಷ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸೂರಳ್ಕರ್ ವಿಕಾಸ್ ಕಿಶೋರ್ ಅವರನ್ನು ಸರಕಾರ ಶನಿವಾರ ಸಂಜೆ ನೇಮಿಸಿದ್ದು,ನೂತನ ಆಯುಕ್ತರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹುದ್ದೆಗೆ ಜೊತೆಗೆ ಬಿಬಿಎಂಪಿ ವಿಶೇಷ ಆಯುಕ್ತರ ಸಮವರ್ತಿತ ಹುದ್ದೆಯಲ್ಲಿಯೂ ಮುಂದುವರಿಯಲಿದ್ದಾರೆ.


ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ತರುವುದರ ಮೂಲಕ ರಾಜ್ಯದಲ್ಲಿ ಹೆಸರುವಾಸಿಯಾಗಿದ್ದ ಸೂರಳ್ಕರ್ ವಿಕಾಸ್ ಕಿಶೋರ್ ಅವರು ಕೊಪ್ಪಳದಲ್ಲಿ ಜಿಲ್ಲಾಧಿಕಾರಿಗಳಾಗಿ,ಯಾದಗಿರಿ, ಬೆಳಗಾವಿ,ವಿಜಯಪುರ ಜಿಲ್ಲೆಗಳಲ್ಲಿ ಜಿಪಂ ಸಿಇಒ ಅವರಾಗಿ ಕರ್ತವ್ಯ ನಿರ್ವಹಿಸಿದ್ದರು.

Related Articles

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...