
ತೀರ್ಥಹಳ್ಳಿ: ರಂಜಾನ್ ಉಪವಾಸ ಮುಗಿಸಿ ಈಜಲು ಹೋಗಿದ್ದ ಮೂವರು ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳು ತುಂಗಾ ನದಿಗೆ ಈಜಲು ಹೋಗಿ ನೀರಿನಲ್ಲಿ ಮುಳುಗಿದ ಘಟನೆ ಇಂದು ಸಂಜೆ ವೇಳೆ ನಡೆದಿದೆ.
ತೀರ್ಥಹಳ್ಳಿ ರಾಮ ಮಂಟಪದ ಪಕ್ಕ ಈ ಘಟನೆ ನಡೆದಿದ್ದು. ಮೂವರು ಬಾಲಕರ ಶವ ಪತ್ತೆಯಾಗಿದೆ. ಸತತವಾಗಿ ಒಂದು ಘಂಟೆಯಿಂದ ತುಂಗಾ ನದಿಯ ತೀರದಲ್ಲಿ ಅಗ್ನಿ ಶಾಮಕ ದಳ ಮತ್ತು ಪೊಲೀಸರು ಹುಡುಕಾಟ ನಡೆಸಿ ಮೃತದೇಹ ಹೊರ ತೆಗೆದಿದ್ದಾರೆ.
ರಫನ್, ಇಯನ್, ಸಮ್ಮರ್ ಎಂಬ ಬಾಲಕರು ಈಜಲು ಹೋದಾಗ ಈ ಘಟನೆ ಜರುಗಿದೆ.
ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಹುಡುಗರು ರಂಜಾನ್ ಉಪವಾಸ ಮುಗಿಸಿ ಸ್ನಾನಕ್ಕೆ ಈಜಲು ಹೋಗಿ ನಾಪತ್ತೆಯಾಗಿದ್ದರು.
