
“ಶಿವಮೊಗ್ಗ ಲೋಕಸಭಾ ಚುನಾವಣೆ ಸಂಬಂಧ, ಕಳೆದ ಚುನಾವಣೆಯಲ್ಲಿ ಕಡಿಮೆ ಪ್ರಮಾಣದ ಮತದಾನವಾದ ಬೂತ್ ಸಂಖ್ಯೆ, 83 ರ ಹೊಸಮನೆಯಲ್ಲಿ ಶಿವಮೊಗ್ಗ ಮಹಾನಗರ ಪಾಲಿಕೆ ಸ್ವೀಪ್ ವತಿಯಿಂದ ಮತದಾನದ ಬಗ್ಗೆ ಜಾಗೃತಿ ಮೂಡಿಸಲಾಯಿತು.
ಈ ಜಾಗೃತಿಯಲ್ಲಿ ಪಾಲ್ಗೊಳ್ಳುವ ಬಗ್ಗೆ ಪುರುಷರು ಮತ್ತು ಮಹಿಳೆಯರಿಗೆ, ಬಕೇಟ್ ಇನ್ ದ ಬಾಲ್ ಆಟ ಆಡಿಸುವ ಮೂಲಕ ಕಡ್ಡಾಯ ಮತದಾನ ಮಾಡುವಂತೆ ಜಾಗೃತಿ ಮೂಡಿಸ ಲಾಯಿತು.
ಹಾಗೂ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿದಂತೆ ಮೇ 07 ರಂದು ನಡೆಯುವ ಮತದಾನದ ದಿನದಂದು ಕೂಡ ತಮ್ಮ ತಮ್ಮ ಬೂತ್ ಗಳಿಗೆ ಹೋಗಿ ತಪ್ಪದೆ ಮತದಾನ ಮಾಡಬೇಕು ಹಾಗೂ ಶಿವಮೊಗ್ಗ ಲೋಕಸಭಾ ಕ್ಷೇತ್ರ ಶೇ 100 ರಷ್ಟು ಮತದಾನವಾಗಬೇಕೆಂದು ಪ್ರತಿಜ್ಞಾ ವಿಧಿ ಭೋದಿಸಲಾಯ್ತು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಸ್ವೀಪ್ ನೋಡಲ್ ಅಧಿಕಾರಿಗಳಾದ ಅನುಪಮ.T.R. ಸುಪ್ರಿಯಾ. ರತ್ನಾಕರ್. ರೇಣು. ಗೀತಾ. ಮತ್ತು ಅಧಿಕಾರಿ ಸಿಬ್ಬಂದಿಗಳು, ಬಿ.ಎಲ್.ಓ ಮತ್ತು ಮೇಲ್ವಿಚಾರಕರು, ಹಾಜರಿದ್ದರು.”