
ಶಿವಮೊಗ್ಗ :ನಗರದ ಕುವೆಂಪು ರಂಗಮಂದಿರದಲ್ಲಿ ದಿನಾಂಕ 05.04.2024 ಶುಕ್ರವಾರ ಸಂಜೆ 6:00 ಗಂಟೆಗೆ ಹಿಂದು ಸೇವಾ ಪ್ರತಿಷ್ಠಾನ ಮತ್ತು ವಿಕಾಸ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿದ್ದ ಮಾಧವ ನೆಲೆ ವಾರ್ಷಿಕೋತ್ಸವ ಕಾರ್ಯಕ್ರಮ ದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಸದ್ಗುರು ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರು ದಿವ್ಯಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.
ಈ ಕಾರ್ಯಕ್ರಮದಲ್ಲಿ ವಿಕಾಸ ಟ್ರಸ್ಟ್ ಅಧ್ಯಕ್ಷರಾದ ಬಿ.ಎ ರಂಗನಾಥ್ ಅವರು, ರಾ.ಸ್ವಂ.ಸಂಘ ಕರ್ನಾಟಕ ದಕ್ಷಿಣ ಪ್ರಾಂತ ಸಹ ಕಾರ್ಯವಾಹರಾದ ಪಟ್ಟಾಭಿರಾಮ ಅವರು, ಮಾಧವ ನೆಲೆ ಅಧ್ಯಕ್ಷರಾದ ಬವರ್ ಲಾಲ್ ನಹರ್ ಅವರು, ಹಿಂದು ಸೇವಾ ಪ್ರತಿಷ್ಠಾನ ಸಂಚಾಲಕರಾದ ಸುರೇಶ್ ಅವರು, ಗಣ್ಯರು, ಹಿಂದು ಸೇವಾ ಪ್ರತಿಷ್ಠಾನ ಮತ್ತು ವಿಕಾಸ ಟ್ರಸ್ಟ್ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.