Wednesday, April 30, 2025
Google search engine
Homeಶಿವಮೊಗ್ಗತುರ್ತು ಕುಡಿಯವ ನೀರಿನ ಕಾಮಗಾರಿ ಕೈಗೊಳ್ಳಲು ಸಿಇಓ ಸೂಚನೆ..!

ತುರ್ತು ಕುಡಿಯವ ನೀರಿನ ಕಾಮಗಾರಿ ಕೈಗೊಳ್ಳಲು ಸಿಇಓ ಸೂಚನೆ..!

ಶಿವಮೊಗ್ಗ: 159 ಕುಡಿಯುವ ನೀರಿನ ಕಾಮಗಾರಿಗಳಿಗೆ ಅನುಮೋದನೆಗೆ ತುರ್ತು ಕುಡಿಯವ ನೀರಿನ ಕಾಮಗಾರಿ ಕೈಗೊಳ್ಳಲು ಸಿಇಓ ಸೂಚನೆ ನೀಡಿದರು
ಜಿಲ್ಲೆಯ ಯಾವುದೇ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ತುರ್ತು ಕುಡಿಯುವ ನೀರಿನ ಕಾಮಗಾರಿಗಳನ್ನು ಕೈಗೊಳ್ಳುವಂತೆ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಅಧಿಕಾರಿಗಳಿಗೆ ಜಿ.ಪಂ ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ ಸೂಚನೆ ನೀಡಿದರು.


ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಪರಿಸ್ಥಿತಿ ಮೇಲೆ ನಿಗಾ ವಹಿಸಬೇಕು. ಅಧಿಕಾರಿಗಳು ಗ್ರಾಮಗಳಿಗೆ ಖುದ್ದು ಭೇಟಿ ನೀಡಿ ಕುಡಿಯುವ ನೀರಿನ ಸಮಸ್ಯೆ ಇದೆಯೇ ಎಂದು ಪರಿಶೀಲಿಸುತ್ತಿರಬೇಕು ಎಂದು ಸೂಚನೆ ನೀಡಿದ ಅವರು, ಕುಡಿಯುವ ನೀರು ಸಮಸ್ಯೆ ಇರುವ ಗ್ರಾಮಗಳಿಗೆ ಅಗತ್ಯವಾಗಿ ಬೇಕಾಗಿರುವ ಕಾಮಗಾರಿಗಳ ಕುರಿತು ತಾಲ್ಲೂಕು ಟಾಸ್ಕ್‍ಫೋರ್ಸ್ ಸಮಿತಿ ಸಲ್ಲಿಸಿರುವ ಕ್ರಿಯಾ ಯೋಜನೆಗೆ ಅನುಮೋದನೆ ನೀಡಿ, ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲು ಸೂಚನೆ ನೀಡಿದರು.


159 ಕಾಮಗಾರಿಗೆ ಅನುಮೋದನೆ :


ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಬೋರ್, ಪೈಪ್‍ಲೈನ್, ರಿ-ಡ್ರಿಲ್ ಸೇರಿದಂತೆ ಕುಡಿಯುವ ನೀರಿಗೆ ಸಂಬಂಧಿಸಿದ ಒಟ್ಟು ರೂ.272.93 ಲಕ್ಷ ಮೊತ್ತದ 159 ಕಾಮಗಾರಿಗಳಿಗೆ ಜಿ.ಪಂ.ಸಿಇಓ ಅನುಮೋದನೆ ನೀಡಿದರು.


ಕುಡಿಯುವ ನೀರಿಗೆ ಸಮಸ್ಯೆ ಇರುವ ಶಿಕಾರಿಪುರ, ಸೊರಬ ಮತ್ತು ತೀರ್ಥಹಳ್ಳಿ ತಾಲ್ಲೂಕುಗಳ ಕಡೆ ಹೆಚ್ಚಿನ ಗಮನ ಹರಿಸಬೇಕು. ಹಾಗೂ ಜಿಲ್ಲೆಯ ಯಾವುದೇ ಭಾಗದಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಕಂಡು ಬಂದಲ್ಲಿ ಶೀಘ್ರ ಕ್ರಮ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಗ್ರಾಮೀಣ ಭಾಗದಲ್ಲಿ ಶುದ್ದ ಕುಡಿಯುವ ನೀರಿನ ಘಟಕಗಳು ಉತ್ತಮ ಸ್ಥಿತಿಯಲ್ಲಿ ಇರುವಂತೆ ನೋಡಿಕೊಳ್ಳಬೇಕು. ರಿಪೇರಿಗೆ ಬಂದಿರುವ ಆರ್‍ಓ ಪ್ಲಾಂಟ್‍ಗಳನ್ನು ತಕ್ಷಣ ರಿಪೇರಿ ಪಡಿಸಬೇಕು. ಒಂದ ಘಟಕ ಕೂಡ ಕಾರ್ಯ ನಿರ್ವಹಿಸದೇ ಇರಬಾರದು. ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಮತ್ತು ಗ್ರಾ.ಪಂ ಗಳು ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸುವ ಮೂಲಕ ಸಮಸ್ಯೆಗಳು ಬಾರದಂತೆ ತಡೆಯಬೇಕೆಂದರು.


ಶಾಲೆಗಳಲ್ಲಿ ಬೇಸಿಗೆ ರಜೆಯಲ್ಲಿ ಸಹ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಯೋಜನೆ ಜಾರಿಯಲ್ಲಿದ್ದು, ಇದೊಂದು ಉತ್ತಮ ಯೋಜನೆಯಾಗಿದೆ. ಮಕ್ಕಳು ಇದರ ಸದುಪಯೋಗ ಪಡೆಯಬೇಕು. ಯಾವುದಾದರೂ ಶಾಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದಲ್ಲಿ ಈ ಕೂಡಲೇ ಪಟ್ಟಿ ಮಾಡಿ ನೀಡುವಂತೆ ತಿಳಿಸಿದರು.


ಬೇಸಿಗೆಯಲ್ಲಿ ಉಷ್ಣಾಂಶ ಏರುತ್ತಿದ್ದು, ಆರೋಗ್ಯ ಇಲಾಖೆಯಿಂದ ಜಿಲ್ಲೆಯಾದ್ಯಂತ ಬಿಸಿತಾಪ ನಿರ್ವಹಣೆ ಕುರಿತಾದ ಕ್ರಿಯಾ ಯೋಜನೆ ಸಿದ್ದಪಡಿಸಿಟ್ಟುಕೊಳ್ಳಬೇಕು. ಹಾಗೂ ಬಿಸಿತಾಪ ನಿರ್ವಹಿಸಲು ಏನೇನು ಕ್ರಮಗಳನ್ನು ಕೈಗೊಳ್ಳಬೇಕು, ಸಾರ್ವಜನಿಕರು ಏನು ಮಾಡಬೇಕು, ಮಾಡಬಾರದು ಎಂಬ ಕುರಿತಾದ ಪೋಸ್ಟರ್‍ನ್ನು ಸಿದ್ದಪಡಿಸಿ ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶಿಸಬೇಕು. ಹೀಟ್‍ವೇವ್‍ಗೆ ಸಂಬಂಧಿಸಿದ ಔಷಧ ಲಭ್ಯವಿರುವಂತೆ ನೋಡಿಕೊಳ್ಳಬೇಕು ಎಂದು ಡಿಹೆಚ್‍ಓ ರವರಿಗೆ ಸೂಚನೆ ನೀಡಿದರು.


ಎಲ್ಲಿ ಕುಡಿಯುವ ನೀರಿನ ಅವಶ್ಯಕತೆ ಇದೆಯೋ ಅಲ್ಲಿ ಶೀಘ್ರವಾಗಿ ಕೆಲಸಗಳು ಆಗಬೇಕು. ಹಾಗು ಕೃಷಿ ಜಂಟಿ ನಿರ್ದೇಶಕರು ಸಹ ತಮ್ಮ ಕ್ಷೇತ್ರದಲ್ಲಿ ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಬೇಕು ಎಂದು ಸೂಚನೆ ನೀಡಿದರು.
ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಕಾರ್ಯಪಾಲಕ ಅಭಿಯಂತರ ರಾಜೇಂದ್ರ ಪ್ರಸಾದ್, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಪೂರ್ಣಿಮಾ, ಡಿಹೆಚ್‍ಓ ಡಾ.ನಟರಾಜ್, ಡಿಎಸ್‍ಓ ಡಾ.ಓ.ಮಲ್ಲಪ್ಪ, ಡಿಡಿಪಿಐ ಪರಮೇಶ್ವಪ್ಪ ಇತರೆ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...