
ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದೆ ಮಳೆ ಇಲ್ಲದೆ ಕೆರೆ ಕಟ್ಟೆಗಳು ಒಣಗಿ ನೀರಿಗೆ ಅಭಾವ ಎದುರಾಗಿದೆ. ಹವಮಾನ ಇಲಾಖೆಯ ಪ್ರಕಾರ ಇದೇ ತಿಂಗಳ 13ರ ನಂತರ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ ಎನ್ನಲಾಗುತ್ತಿದೆ. ಆದರೆ ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದು ಕೊಂಚ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಳೆಯ ಅಭಾವ ಎದುರಾದಾಗ ಮೋಡ ಬಿತ್ತನೆ ಅಂತಹ ಕಾರ್ಯಗಳು ಕೈಗೊಳ್ಳುತ್ತಿದ್ದರು ಈಗ ಅದೇ ಪರಿಸ್ಥಿತಿ ನಿರ್ಮಾಣವಾಗಿದೆ ರಾಜ್ಯದ್ಯಂತ ನೀರಿಗೆ ಅಭಾವ ಸೃಷ್ಟಿಯಾಗಿದೆ ಸದ್ಯ ಮಳೆ ಬರದೇ ಇದ್ದರೆ ಸರ್ಕಾರ ಮೋಡ ಬಿತ್ತನೆಗೆ ಚಿಂತನೆ ನಡೆಸಬೇಕಾಗುತ್ತದೆ.
ರಾಜ್ಯದ್ಯಂತ ನೀರಿಗೆ ಅಭಾವ ಸೃಷ್ಟಿಯಾಗಿದ್ದು ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಲ್ಲೂ ಕೂಡ ನೀರಿಗೆ ಅಭಾವ ಸೃಷ್ಟಿಯಾಗಿದೆ ಇದು ಹೀಗೆ ಮುಂದುವರೆದರೆ ಕುಡಿಯುವ ನೀರಿಗೂ ಅಭಾವ ಸೃಷ್ಟಿಯಾಗುವ ಸಾಧ್ಯತೆ ಹೆಚ್ಚಾಗಿದ್ದು ಮುಂಜಾಗ್ರತೆಯ ಕ್ರಮವಾಗಿ ಜಿಲ್ಲಾಡಳಿತ ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತಿದೆ ಆದರೂ ಮಲೆನಾಡಿನಲ್ಲಿಯೇ ನೀರಿಗೆ ಅಭಾವ ಆದರೆ ಇನ್ನೂ ಉತ್ತರ ಕರ್ನಾಟಕದ ಪರಿಸ್ಥಿತಿ ಹೇಗಿರಬೇಡ ನೀವೇ ಊಹಿಸಿ ಹಾಗಾಗಿ ಮಳೆ ಸದ್ಯದಲ್ಲಿ ಬರದಿದ್ದರೆ ಮುಂದೆ ಭಾರಿ ಅನಾವೃಷ್ಟಿ ಸಂಭವಿಸುವ ಎಲ್ಲಾ ಲಕ್ಷಣಗಳು ಗೋಚರವಾಗುತ್ತಿವೆ.
ಈಗಿನ ವಾತಾವರಣವನ್ನು ಗಮನಿಸುತ್ತಿದ್ದರೆ ಶಿವಮೊಗ್ಗ ಚಿಕ್ಕಮಂಗಳೂರು ದಾವಣಗೆರೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದು ಕೊಂಚ ಮಳೆಯಾಗುವ ಸಾಧ್ಯತೆ ಇದೆ ಎಂದು ಅವಮಾನ ಇಲಾಖೆ ತಿಳಿಸಿದೆ.