
ಲೋಕಸಭಾ ಚುನಾವಣೆ ಬೆನ್ನಲ್ಲೇ ರಾಷ್ಟ್ರೀಯ ಪಕ್ಷ ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದ್ದಿದ್ದು ಸ್ವಪಕ್ಷ ಬಿಜೆಪಿಯ ವಿರುದ್ಧವೇ ಅಸಮಾಧಾನ ಹೊರಹಾಕುತ್ತಿದ್ದು ಕೆಲವು ನಾಯಕರು ಪಕ್ಷದ ವಿರುದ್ಧ ಕಾರ್ಯನಿರ್ವಹಿಸುತ್ತಿದ್ದಾರೆ ಎನ್ನುವ ಆರೋಪಗಳಿವೆ.
ಹಾಲಿ ಶಾಸಕ ಯಲ್ಲಾಪುರದ ಶಿವರಾಮ್ ಹೆಬ್ಬಾರ್ ಉತ್ತರ ಕನ್ನಡ ಜಿಲ್ಲೆಯ ಬಿಜೆಪಿ ಪಾಲಿಗೆ ಬಿಸಿ ತುಪ್ಪವಾಗಿದ್ದು, ಪಕ್ಷದ ಪ್ರಚಾರಕ್ಕೂ ಬಾರದೇ ಇತ್ತ ಪಕ್ಷ ಬಿಟ್ಟು ಕಾಂಗ್ರೆಸ್ ಕಡೆಯೂ ಹೋಗದೆ ಸ್ವಪಕ್ಷ ಬಿಜೆಪಿಯ ವಿರುದ್ಧವೇ ಚುನಾವಣೆ ನಡೆಸುತ್ತಿದ್ದು ಕಾಂಗ್ರೆಸ್ ಕಡೆ ಮತಯಾಚನೆ ಮಾಡುತ್ತಿದ್ದಾರೆ.
ಅಧಿಕಾರಕ್ಕಾಗಿ ಅಂದಿನ ಕಾಂಗ್ರೆಸ್ ಸರ್ಕಾರವನ್ನೇ ಬೀಳಿಸಿ ಬಂಡಾಯವೆದ್ದಿದ್ದ ಬಾಂಬೆ ಬಾಯ್ಸ್ ಗಳಲ್ಲಿ ಯಲ್ಲಾಪುರದ ಶಾಸಕ ಶಿವರಾಮ್ ಹೆಬ್ಬಾರ್ ಕೂಡ ಒಬ್ಬರು.ಬಿಜೆಪಿ ಹೆಸರಿನಲ್ಲಿ ಗೆದ್ದ ಯಲ್ಲಾಪುರ ಶಾಸಕ ಮತ್ತೊಮ್ಮೆ ರೆಬೆಲ್ ಆಗಿದ್ದಾರೆ.
ಪುತ್ರನನ್ನು ಕಾಂಗ್ರೆಸ್ ಗೆ ಸೇರಿಸಲು ಕಸರತ್ತು :
ತಮ್ಮ ಪುತ್ರನ ರಾಜಕೀಯ ಭವಿಷ್ಯಕ್ಕಾಗಿ ಕಾಂಗ್ರೆಸ್ ಪಕ್ಷದ ಜೊತೆ ಕಾಣಿಸಿಕೊಳ್ಳುತ್ತಿರುವ ಶಿವರಾಂ ಹೆಬ್ಬಾರ್ ಶೀಘ್ರದಲ್ಲೇ ತಮ್ಮ ಪುತ್ರನನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಲು ತೆರೆಮರೆಯಲ್ಲಿ ಕಸರತ್ತು ನಡೆಸುತ್ತಿದ್ದಾರೆ ಎನ್ನಲಾಗುತ್ತಿದೆ.
ಹೆಬ್ಬಾರ್ ನಡೆಗೆ ವಿಶ್ವೇಶ್ವರ ಹೆಗಡೆ ಕಾಗೇರಿ ಕಿಡಿ :
ಇನ್ನು ಬಿಜೆಪಿಯಲ್ಲೇ ಇದ್ದು ಕಾಂಗ್ರೆಸ್ ಪರ ಪ್ರಚಾರಕ್ಕಿಳಿದಿರುವ ಹೆಬ್ಬಾರ್ ನಡೆಗೆ ಪಕ್ಷದಲ್ಲಿ ಅಸಮಾಧಾನ ಹೆಚ್ಚಿಸಿದೆ. ಇದೇ ವಿಚಾರವಾಗಿ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗ್ಡೆ ಕಾಗೇರಿಯವರು ಹೆಬ್ಬಾರ್ ವಿರುದ್ಧ ಕಿಡಿಕಾರಿದ್ದಾರೆ.
ಶಿವರಾಮ್ ಹೆಬ್ಬಾರ್ ಬಿಜೆಪಿ ತೊರೆದರೆ ಬಿಜೆಪಿಗೆ ನಷ್ಟ :
ಶಿವರಾಂ ಹೆಬ್ಬಾರ್ ನಡೆಯ ವಿರುದ್ಧ ಬಿಜೆಪಿ ಕ್ರಮ ಕೈಗೊಂಡರೆ ಬಿಜೆಪಿ ಪಕ್ಷಕ್ಕೆ ನಷ್ಟ ಆಗುವ ಸಾಧ್ಯತೆ ಇದ್ದು ಅವರಾಗಿಯೇ ಕಾಂಗ್ರೆಸ್ ಪಕ್ಷಕ್ಕೆ ಸೇರಿಕೊಂಡರೆ ಬಿಜೆಪಿಗೆ ಲಾಭವಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ .