
ಹಿಂದೂಗಳ ಅಗತ್ಯ ನಮಗೆ ಬೇಡ ಮುಸ್ಲಿಂಮರ ಓಟು ಹಾಕು: ಸಿದ್ದರಾಮಯ್ಯ ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟಲು ಬಯಸುತ್ತೇನೆ ಮುಸ್ಲಿಮರ ಓಲೈಕೆ ಕುರಿತು ಬಿಜೆಪಿಯ ಟೀಕೆಗೆ ತಲೆಕೆಡಿಸಿಕೊಳ್ಳಬೇಡಿ ಎಂಬ ತಲೆಬರಹದಡಿಯಲ್ಲಿ ಸುದ್ದಿ ಒಂದು ಪ್ರಕಟವಾಗಿದ್ದು ಇದು ಎಲ್ಲೆಡೆ ವೈರಲ್ ಆಗಿತ್ತು.
ಈ ಸುದ್ದಿಯ ಬಗ್ಗೆ ಸ್ಪಷ್ಟ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ :
ಮೇಲ್ಕಂಡ ತಲೆಬರದರಡಿಯಲ್ಲಿ ಪ್ರಕಟವಾದ ಸುದ್ದಿಯ ಬಗ್ಗೆ ಸ್ಪಷ್ಟನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಇದು ಬಿಜೆಪಿ – ಜೆಡಿಎಸ್ ಮಿತ್ರಮಂಡಳಿ ಕೃಪಾಪೋಷಿತ ಕಿಡಿಗೇಡಿಗಳು ವಾರ್ತಾಪತ್ರಿಕೆಯನ್ನು ಹೋಲುವ ಸುಳ್ಳು ಸುದ್ದಿಯ ತುಣುಕೊಂದನ್ನು ಸೃಷ್ಟಿಸಿ, ಅದರಲ್ಲಿ ಜನರ ಕೋಮುಭಾವನೆ ಕೆರಳಿಸುವ ಸುದ್ದಿಯನ್ನು ತುಂಬಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಈ ಬಗ್ಗೆ ಈಗಾಗಲೇ ನಾನು ಪೊಲೀಸ್ ಇಲಾಖೆಗೆ ದೂರು ನೀಡಿದ್ದೇನೆ. ಇದರ ಹಿಂದಿರುವ ದುಷ್ಟ ಶಕ್ತಿ ಯಾರು ಎಂಬ ಬಗ್ಗೆ ನಮಗೆ ಮಾಹಿತಿ ಇದ್ದು, ಆದಷ್ಟು ಬೇಗನೆ ಅವರನ್ನು ನ್ಯಾಯದ ಕೈಗಳಿಗೆ ಒಪ್ಪಿಸಲಾಗುವುದು.
ರಾಜಕೀಯ ವಿರೋಧಿಗಳನ್ನು ನ್ಯಾಯಸಮ್ಮತ ರೀತಿಯಲ್ಲಿ ಎದುರಿಸಲಾಗದೆ ಇಂತಹ ಅಡ್ಡದಾರಿ ಮೂಲಕ ಚುನಾವಣೆ ಗೆಲ್ಲಲು ಹೊರಟಿರುವುದು
@BJP4Karnataka
ಮತ್ತು ಜೆಡಿಎಸ್‌ನ ಬೌದ್ಧಿಕ ದಿವಾಳಿತನವನ್ನು ತೋರಿಸುತ್ತದೆ. ಹತ್ತು ವರ್ಷಗಳ ಕಾಲ ದೇಶದ ಆಡಳಿತ ನಡೆಸಿದ ಪಕ್ಷವೊಂದು ಚುನಾವಣೆ ಗೆಲ್ಲಲು ಸುಳ್ಳು ಸುದ್ದಿಯ ಮೊರೆ ಹೋಗುವಂತಹ ಹೀನಾಯ ಸ್ಥಿತಿಗೆ ತಲುಪಬಾರದಿತ್ತು.
ಸುಳ್ಳು ಸುದ್ದಿಗಳನ್ನು ನಂಬಿ ಶೇರ್ ಮಾಡುವ ಮುನ್ನ ಎಚ್ಚರಿಕೆ ವಹಿಸಿ….!!
ಸುಳ್ಳು ಸುದ್ದಿಯ ಸೃಷ್ಟಿಕರ್ತರು, ಅವರ ಬೆನ್ನ ಹಿಂದೆ ಬೆಂಬಲಕ್ಕೆ ನಿಂತಿರುವವರು ಹೀಗೆ ಫೇಕ್ ಫ್ಯಾಕ್ಟರಿಯನ್ನು ಕಾನೂನಿನ ಮೂಲಕ ಬೇರು ಸಹಿತ ಕಿತ್ತೆಸೆಯುತ್ತೇವೆ.

ಎನ್ನುವ ಸಂದೇಶವನ್ನು ನೀಡಿದ್ದಾರೆ.