Home ಕಾಂಗ್ರೆಸ್ರಾಜಕೀಯ ಅನುಭವಕ್ಕೆ ಅವಕಾಶ ಮುಖ್ಯ: ನಟ ಶಿವರಾಜಕುಮಾರ್

ರಾಜಕೀಯ ಅನುಭವಕ್ಕೆ ಅವಕಾಶ ಮುಖ್ಯ: ನಟ ಶಿವರಾಜಕುಮಾರ್

by EDITOR NEWS WARRIORS
0 comments

ಶಿವಮೊಗ್ಗ: ಹುಟ್ಟುತ್ತಲೇ ಯಾರೂ ಕೂಡ ಅನುಭವ ಪಡೆದು ಹುಟ್ಟುವುದಿಲ್ಲ. ರಾಜಕೀಯ ಅನುಭವ ಪಡೆಯಲು ಅವಕಾಶ ನೀಡಬೇಕು ಎಂದು ನಟ ಶಿವರಾಜಕುಮಾರ್ ಹೇಳಿದರು.

ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ನಗರದ ಸಿದ್ದೇಶ್ವರ ನಗರದ ೧೪ ನೇ ವಾರ್ಡಿನಲ್ಲಿ ಬುಧವಾರ ಆಯೋಜಿಸಿದ್ದ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಗೀತಾ ಅವರ ರಕ್ತದಲ್ಲಿಯೇ ಸಮಾಜ ಸೇವೆಯ ಗುಣ ಇದೆ. ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರು, ಸಾಮಾಜಿಕ ಮೌಲ್ಯಗಳನ್ನು ಗೀತಾಗೆ ವರವಾಗಿ ನೀಡಿ ಹೋಗಿದ್ದಾರೆ. ಇದು ರಾಜಕೀಯ ಪ್ರವೇಶಕ್ಕೆ ಪ್ರೇರಣೆ ನೀಡಿದೆ ಎಂದರು‌.

ಮಹಿಳೆಯರು ಎಲ್ಲಾ ರಂಗದಲ್ಲಿಯೂ ಮುಂದೆ ಇದ್ದಾರೆ. ಗೀತಾಗೆ ಒಂದು ಅವಕಾಶ ಕೊಡಿ ನಾನು ಅವರಿಂದ ಕೆಲಸ ಮಾಡಿಸುತ್ತೇನೆ‌ ಎಂದರು.

ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಮಾತನಾಡಿ, ಶಿವಮೊಗ್ಗ ಜನರ ಸೇವೆ ಮಾಡಲು ಸಿಕ್ಕ ಅವಕಾಶವಿದು. ಕೇವಲ ಚುನಾವಣೆಯಲ್ಲಿ ಮತಗಳಿಕೆಯ ರಾಜಕೀಯಕ್ಕೆ ಸ್ವಾರ್ಥದಿಂದ ಗ್ಯಾರಂಟಿ ಯೋಜನೆಗಳನ್ನು ನೀಡಿಲ್ಲ. ಇಲ್ಲಿ ಭ್ರಷ್ಟಾಚಾರ, ಬೆಲೆ ಏರಿಕೆ, ನಿರುದ್ಯೋಗ ಮತ್ತು ದುರಾಡಳಿತದಿಂದ ಜನ ಸಾಮಾನ್ಯರನ್ನು ಮುಕ್ತಗೊಳಿಸಲು ಈ ಯೋಜನೆಗಳನ್ನು ನೀಡಲಾಗಿದೆ ಎಂದರು.

ಜಿಲ್ಲೆಯಲ್ಲಿ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರು ಜನರಿಗೆ ನೆರಳಾಗಿದ್ದರು. ಅದೇ ಹಾದಿಯಲ್ಲಿ ನಾನೂ ಕೂಡ ಸಾಗಬೇಕು ಎಂದು ಕನಸು ಕಂಡಿದ್ದೇನೆ. ಇದಕ್ಕೆ ಜನರು ಅವಕಾಶ ಕಲ್ಪಿಸಿಕೊಡಬೇಕು ಎಂದರು.

ಕಾಂಗ್ರೆಸ್ ಜಿಲ್ಲಾ ಘಟಕ ಅಧ್ಯಕ್ಷ ಆರ್.ಪ್ರಸನ್ನ ಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ಬಿಜೆಪಿ ಪಕ್ಷದವರು ಕಳೆದ ೧೫ ವರ್ಷಗಳಿಂದ ಸುಳ್ಳು ಹೇಳಿಕೊಂಡು, ಜನ ಸಾಮಾನ್ಯರಿಗೆ ಪೊಳ್ಳು ಭರವಸೆ ನೀಡುತ್ತ ರಾಜಕಾರಣ ಮಾಡಿಕೊಂಡು ಬಂದಿದ್ದಾರೆ. ಇದಕ್ಕೆ, ಉತ್ತರವಾಗಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರಿಗೆ ಮತ ನೀಡಿ ಬೆಂಬಲಿಸಬೇಕು ಎಂದರು.

ಕಾಂಗ್ರೆಸ್ ಮುಖಂಡ ಎಚ್.ಸಿ.ಯೋಗೀಶ್ ಮಾತನಾಡಿ, ಗ್ಯಾರಂಟಿ ಯೋಜನೆಯ ಪ್ರಯೋಜನ ಪಡೆದು ಓದು ಆರಂಭಿಸಿದ ವಿದ್ಯಾರ್ಥಿಯೊರ್ವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾನೆ. ವಿದ್ಯಾರ್ಥಿ ಮಾಧ್ಯಮಗಳ ಎದುರು ‘ತಂದೆಯನ್ನು ಕಳೆದುಕೊಂಡಿರುವ ನನಗೆ ಮತ್ತು ನನ್ನ ತಾಯಿಗೆ ಗೃಹಲಕ್ಷ್ಮಿ ಯೋಜನೆ ನೆರವು ನೀಡಿದೆ ಎಂದು ತಿಳಿಸಿದ್ದಾನೆ‌. ಇದರಿಂದ, ಗ್ಯಾರಂಟಿ ಯೋಜನೆಗಳು ಬಡ ಮಕ್ಕಳ ಓದಿಗೆ ಸಹಕಾರಿ ಆಗಿದೆ ಎನ್ನುವುದನ್ನು ಜನ ಸಾಮಾನ್ಯರು ಅರ್ಥೈಸಿಕೊಳ್ಳಬೇಕು ಎಂದರು.

ಸೂಡ ಅಧ್ಯಕ್ಷ ಎಚ್.ಎಸ್.ಸುಂದರೇಶ್, ಕಾಂಗ್ರೆಸ್ ಮುಖಂಡರಾದ ಎಂ.ಶ್ರೀಕಾಂತ್, ಕಲಗೋಡು ರತ್ನಾಕರ್, ಕಲೀಂ ಪಾಶ, ರಮೇಶ್ ಹೆಗ್ಡೆ, ಯಮುನಾ ರಂಗೇಗೌಡ ಸೇರಿ ಕಾರ್ಯಕರ್ತರು ಇದ್ದರು.

Related Articles

Latest news
ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ...