
ಲೋಕಸಭಾ ಟಿಕೆಟ್ ಹಂಚಿಕೆಯಲ್ಲಿ ಅಸಮಾಧಾನಗೊಂಡಿರುವ ಕೆಲವು ನಾಯಕರುಗಳು ಬಿಜೆಪಿ ಪಕ್ಷದ ವಿರುದ್ಧ ವಿರೋಧಿ ಚಟುವಟಿಕೆ ನಡೆಸುತ್ತಿದ್ದು ತಮ್ಮ ಅಸಮಾಧಾನಗಳನ್ನು ಬಹಿರಂಗವಾಗಿ ಹೊರಹಾಕುತ್ತಿದ್ದು ಕೆ ಎಸ್ ಈಶ್ವರಪ್ಪ ನಂತಹ ಬಿಜೆಪಿ ಹಿರಿಯ ನಾಯಕರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದರೆ ಇನ್ನು ಕೆಲವು ನಾಯಕರುಗಳು ಬಹಿರಂಗವಾಗಿ ಕಾಂಗ್ರೆಸ್ ಗೆ ಪ್ರಚಾರ ಮಾಡುತ್ತಿದ್ದಾರೆ.
ಕೊಪ್ಪಳ ಲೋಕಸಭಾ ಕ್ಷೇತ್ರದ ಸಂಸದ ಕರಡಿ ಸಂಗಣ್ಣ ಕಾಂಗ್ರೆಸ್ ಗೆ..?!
ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕೊಪ್ಪಳ ಕ್ಷೇತ್ರದ ಟಿಕೆಟ್ ಪ್ರಬಲ ಆಕಾಂಕ್ಷಿಯಾಗಿದ್ದ ಕರಡಿ ಸಂಗಣ್ಣಗೆ ನಿರಾಸೆಯಾಗಿದ್ದು ಅವರಿಗೆ ಬಿಜೆಪಿ ಟಿಕೆಟ್ ನೀಡಿಲ್ಲ ಈ ಕಾರಣದಿಂದ ಅಸಮಾಧಾನಗೊಂಡಿರುವ ಕರಡಿ ಸಂಗಣ್ಣನವರು ಕಾಂಗ್ರೆಸ್ಗೆ ಹೋಗುವ ಎಲ್ಲಾ ಮುನ್ಸೂಚನೆಗಳು ಕಾಣುತ್ತಿವೆ ಇದಕ್ಕೆ ಪೂರಕವಾಗಿ ಕಾಂಗ್ರೆಸ್ ಲಕ್ಷ್ಮಣ್ ಸವದಿ ಅವರು ಕರಡಿ ಸಂಗಣ್ಣ ನವರನ್ನು ಭೇಟಿಯಾಗಿ ಮಾತುಕತೆ ನಡೆಸಿರುವುದು ಕುತೂಹಲ ಮೂಡಿಸಿದೆ.