
ಬೈಕ್ ನಲ್ಲಿ ಹೊಗುತ್ತಿರುವಾಗ ಮರ ಬಿದ್ದು ಮೃತಪಟ್ಟ ವ್ಯಕ್ತಿ ತೀರ್ಥಹಳ್ಳಿಯಲ್ಲಿ ಮಳೆಗೆ ಮೊದಲ ಬಲಿ
ತೀರ್ಥಹಳ್ಳಿ : ತಾಲೂಕಿನ ಕೋಣಂದೂರು ಸಮೀಪದ ದೇಮ್ಲಾಪುರ ಗ್ರಾಮಪಂಚಾಯಿತಿ ವ್ಯಾಪ್ತಿಯ ತೊರೆಬೈಲು ಗ್ರಾಮದ ಸಂಪಗಾರಿನ
ವ್ಯಕ್ತಿಯೊಬ್ಬರು ಗಾಳಿ ಮಳೆಯಿಂದ ಮರ ಬಿದ್ದು ಮೃತಪಟ್ಟಿದ್ದಾರೆ.
ಜಯಂತ್ ಭಟ್ (64 ವರ್ಷ ) ಕೋಣಂದೂರಿನಿಂದ ಮನೆಗೆ ಹೋಗುವಾಗ ಬಾರಿ ಗಾಳಿ ಮಳೆಗೆ ಅಕೇಶಿಯಾ ಮರ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಕೋಣಂದೂರು ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.
ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅರಣ್ಯ ಇಲಾಖೆಯ ಅಧಿಕಾರಿಗಳ ಬೇಜವಾಬ್ದಾರಿತನದಿಂದ ಸಮಯಕ್ಕೆ ಸರಿಯಾಗಿ ಮರ ಕಡಿಸಿದೆ ಆದ ದುರಂತ ಇದಾಗಿದ್ದು ಇನ್ನು ಮುಂದಾದರೂ ಎಚ್ಚೆತ್ತುಕೊಂಡು ರಸ್ತೆಗಳಿಗೆ ಬಾಗಿರುವ ಮರಗಳನ್ನು ಕಡಿದು ಪ್ರಯಾಣಿಕರ ಪ್ರಾಣವನ್ನು ರಕ್ಷಣೆ ಮಾಡುತ್ತಾರಾ ಕಾದುನೋಡಬೇಕು.