Wednesday, April 30, 2025
Google search engine
Homeಶಿವಮೊಗ್ಗಆರೋಗ್ಯಕಾಯಿಲೆಗಳ ಬಗ್ಗೆ ನಿರ್ಲಕ್ಷ್ಯ ಬೇಡ ಜಾಗ್ರತೆ ಇರಲಿ ಡಿಎಚ್ಒ ಡಾ/ ನಟರಾಜ್..!

ಕಾಯಿಲೆಗಳ ಬಗ್ಗೆ ನಿರ್ಲಕ್ಷ್ಯ ಬೇಡ ಜಾಗ್ರತೆ ಇರಲಿ ಡಿಎಚ್ಒ ಡಾ/ ನಟರಾಜ್..!

ಕಾಯಿಲೆಗಳ ನಿರ್ಲಕ್ಷ್ಯ ಬೇಡ ಜಾಗ್ರತೆ : ಡಾ ನಾಗರಾಜ್
ಶಿವಮೊಗ್ಗ ಏ.25 (ಕರ್ನಾಟಕ ವಾರ್ತೆ) ಕಾಯಿಲೆಗಳ ಪ್ರಮಾಣ ಕಡಿಮೆಯಾಗಿದೆ ಎಂದು ನಿರ್ಲಕ್ಷ್ಯ ಬೇಡ ಜಾಗೃತರಾಗಿ ಇರಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಟರಾಜ್ ಅವರು ತಿಳಿಸಿದರು.


ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಸಂಜೆ ಕಾಲೇಜಿನಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ರೋಗಾವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮದ ವತಿಯಿಂದ ಆಯೋಜಿಸಿದ ವಿಶ್ವ ಮಲೇರಿಯಾ ದಿನಚರಣೆ ಉದ್ಘಾಟಿಸಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಟರಾಜ್ ಮಾತನಾಡಿದರು.
ಕಾಯಿಲೆಗಳನ್ನು ಇಂದಿನ ಜನಾಂಗ ಸಾಕಷ್ಟು ನಿರ್ಲಕ್ಷಿಸುತ್ತಿದ್ದಾರೆ ಮೊಬೈಲ್ ಮೂಲಕ ಪ್ರತಿಯೊಂದನ್ನು ಕ್ಷಣದಲ್ಲಿ ತಿಳಿದುಕೊಳ್ಳುವ ಸೌಲಭ್ಯ ಇರುವುದರಿಂದ ಕಾಯಿಲೆಗಳ ಬಗ್ಗೆ ಭಯವಿಲ್ಲದಂತಾಗಿದೆ.

ಮಲೇರಿಯಾ ಕಾಯಿಲೆ ಈಗ ಕಡಿಮೆಯಾಗಿದೆ ಎಂದು ನಿರ್ಲಕ್ಷ್ಯ ಮಾಡಬಾರದು ಈ ಕಾರ್ಯಕ್ರಮಗಳ ಮೂಲಕ ಮಾಹಿತಿ ಪಡೆದು ವಿದ್ಯಾರ್ಥಿಗಳು ತಮ್ಮ ಮನೆ ಮತ್ತು ಸುತ್ತಮುತ್ತಲಿನ ಜನರಿಗೆ ಈ ಕಾಯಿಲೆ ಕುರಿತು ಅರಿವು ಮೂಡಿಸಿ ಕಾಯಿಲೆಯನ್ನು ತಡೆಗಟ್ಟಲು ಮುಂದಾಗಬೇಕಾಗಿದೆ ಎಂದರು.


ಜಿಲ್ಲಾ ರೋಗಾವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಗುಡದಪ್ಪ ಕಸಬಿ ಮಾತನಾಡಿ ಮಲೇರಿಯಾ ಕಾಯಿಲೆ ಪುರಾತನ ಕಾಲದಿಂದಲೂ ಎಡೆಬಿಡದೇ ಕಾಡಿಸುತ್ತಿದೆ ಇಂದಿಗೂ ಪ್ರತಿ ವರ್ಷ ಮಲೇರಿಯಾದಿಂದ 20 ಸಾವಿರಕ್ಕೂ ಅಧಿಕ ಜನರು ಸಾವನ್ನಪ್ಪುತ್ತಿದ್ದಾರೆ. ಹೆಣ್ಣು ಸೊಳ್ಳೆ ಕಚ್ಚುವುದರಿಂದ ಮಲೇರಿಯಾ ಕಾಯಿಲೆ ಬರುತ್ತದೆ ನಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ಸೊಳ್ಳೆಗಳು ಸುಳಿಯದಂತೆ ಎಚ್ಚರ ವಹಿಸಬೇಕು 2005 ರಾಷ್ಟ್ರೀಯ ಕೀಟಜನ್ಯ ನಿಯಂತ್ರಣ ಕಾರ್ಯಕ್ರಮದ ಮೂಲಕ ಮಾಹಿತಿಯನ್ನು ಪಡೆದುಕೊಳ್ಳಬಹುದು ಎಂದರು.


ಮಲೇರಿಯಾ ಕಾಯಿಲೆ ಹೇಗೆ ಹರಡುತ್ತದೆ, ನಿಯಂತ್ರಿಸುವ ಕುರಿತು ಇರುವ ಯೋಜನೆಗಳು, ಇಲಾಖೆ ಸೌಲಭ್ಯಗಳ ಬಗ್ಗೆ ಪ್ರತಿಯೊಬ್ಬರು ಮಾಹಿತಿ ತಿಳಿಯುವುದು ಅಗತ್ಯವಾಗಿದೆ. ಮಲೇರಿಯಾ ವಿರುದ್ಧ ನಿರಂತರವಾಗಿ ಹೋರಾಟ ಫಲವಾಗಿ ಜಿಲ್ಲೆಯಲ್ಲಿ 2024ರ ಅವಧಿಗೆ 03 ಜನರಿಗೆ ಮಾತ್ರ ಸೋಂಕು ಕಾಣಿಸಿಕೊಂಡಿದೆ ಎಂದರು.


ಕಾರ್ಯಕ್ರಮದಲ್ಲಿ ಜಿಲ್ಲಾ ಆರ್‍ಸಿಹೆಚ್ ಅಧಿಕಾರಿ ಡಾ.ನಾಗರಾಜ ನಾಯ್ಕ್,ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮಲ್ಲಪ್ಪ, ತಾಲ್ಲೂಕ್ ಆರೋಗ್ಯಾಧಿಕಾರಿ ಡಾ.ಚಂದ್ರಶೇಖರ್,ಆರೋಗ್ಯ ಇಲಾಖೆಯ ಡಾ.ಧನಂಜಯ್, ನಾರಾಯಣ, ರೋಟರಿ ಸಂಸ್ಥೆ ಅಧ್ಯಕ್ಷರಾದ ಸತೀಶ್ ಚಂದ್ರ, ರೋಟರಿ ಮಾಜಿ ಅಸಿಸ್ಟೆಂಟ್ ಗವರ್ನರ್ ವಿಜಯಕುಮಾರ್ ಜಿ, ಕಾಲೇಜಿನ ಪ್ರಾಂಶುಪಾಲರಾದ ಪ್ರೋ.ಮಮತ, ಎನ್‍ಎಸ್‍ಎಸ್ ಕಾರ್ಯಕ್ರಮ ಅಧಿಕಾರಿ ನಾಗರಾಜ ಕೆ.ಎಂ, ಪ್ರೋ ಜಗದೀಶ್,ಕಾಲೇಜಿನ ಉಪನ್ಯಾಶಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...