
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ವಿನೋದ್ ರಾಜ್ ಲೇಟ್ ಭಾಸ್ಕರ್ ಶೆಟ್ಟಿ ಎನ್ನುವ 29 ವರ್ಷದ ಯುವಕನನ್ನು ಗಡಿಪಾರು ಮಾಡಿದ್ದು ಹಿಂದುಳಿದ ಗಾಣಿಗರ ಜಾತಿಗೆ ಒಳಪಟ್ಟ ಈ ಯುವಕ ಡ್ರೈವಿಂಗ್ ಮತ್ತು ಸಿಮೆಂಟ್ ಇಟ್ಟಿಗೆ ತಯಾರಿಸುವ ಕೆಲಸ ನಿರ್ವಹಿಸುತ್ತಿದ್ದು ಈತನ ಮೇಲೆ ವಿನಾಕಾರಣ ಇಲ್ಲಸಲ್ಲದ ಆರೋಪಗಳನ್ನು ಹೊರಸಿ ಸಾಗರ ತಾಲೂಕಿನ ಎಸಿ ಗಡಿಪಾರ್ ಆದೇಶ ಹೊರಡಿಸಿದ್ದಾರೆ.
ಈತ ಬಿಜೆಪಿ ಪಕ್ಷದಲ್ಲಿ ಹಲವಾರು ವರ್ಷಗಳಿಂದ ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿದ್ದು ಕಾಂಗ್ರೆಸ್ ಸರ್ಕಾರ ವಿನಾಕಾರಣ ಈತನ ಮೇಲೆ ಸುಳ್ಳು ಆರೋಪಗಳನ್ನು ಹೊರಿಸಿ ಗಡಿಪಾರು ಮಾಡಲು ಅಧಿಕಾರಿಗಳಿಗೆ ಕುಮ್ಮಕ್ಕು ನೀಡಿದೆ. ಕೂಡಲೇ ಈತನ ಗಡಿಪಾರು ಆದೇಶವನ್ನು ರದ್ದುಗೊಳಿಸಬೇಕಾಗಿ ತಮ್ಮಲ್ಲಿ ಮನವಿ ಮಾಡಿಕೊಳ್ಳುತ್ತೇವೆ ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರವನ್ನು ನೀಡಿದ್ದು ಹಾಗೆ ಜಿಲ್ಲಾಧಿಕಾರಿಗಳ ಕಚೇರಿಯ ಮುಂದೆ ಪ್ರತಿಭಟನೆ ಕೂಡ ನಡೆಸುತ್ತಿದ್ದಾರೆ.
ಈ ಪ್ರತಿಭಟನೆಯಲ್ಲಿ ಸಂಸದ ಬಿ ವೈ ರಾಘವೇಂದ್ರ ಜಿಲ್ಲಾಧ್ಯಕ್ಷರಾದ ಟಿಡಿ ಮೇಘರಾಜ್ ಒಳಗೊಂಡಂತೆ ಹಲವು ಬಿಜೆಪಿ ಕಾರ್ಯಕರ್ತರು ಮುಖಂಡರು ಭಾಗವಹಿಸಿದ್ದಾರೆ.
