
ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಒಂದಷ್ಟು ವಿದ್ಯಾರ್ಥಿಗಳು ಉತ್ತಮ ಅಂಕ ತೆಗೆದುಕೊಂಡು ಹರ್ಷ ವ್ಯಕ್ತಪಡಿಸುತ್ತಿದ್ದಾರೆ. ಇನ್ನಷ್ಟು ವಿದ್ಯಾರ್ಥಿಗಳು ಕಡಿಮೆ ಅಂಕ ತೆಗೆದುಕೊಂಡರು ತೃಪ್ತಿ ಕೊಂಡಿದ್ದಾರೆ. ಎಸ್ ಎಸ್ ಎಲ್ ಸಿ ಯಲ್ಲಿ ಫೇಲಾದ ವಿದ್ಯಾರ್ಥಿಗಳು ಮತ್ತೆ ಪರೀಕ್ಷೆ ಬರೆಯಲು ತಯಾರಿ ನಡೆಸುತ್ತಿದ್ದಾರೆ.
ಇದರ ನಡುವೆ ಚಿತ್ರದುರ್ಗದ ವಿದ್ಯಾರ್ಥಿನಿ ಒಬ್ಬಳು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ನಾಲ್ಕು ವಿಷಯ ಫೇಲಾಗಿದ್ದಕ್ಕೆ ನೇಣಿಗೆ ಶರಣಾಗಿದ್ದಾಳೆ.
ಫಲಿತಾಂಶದಲ್ಲಿ ವಿಫಲತೆ ಕಂಡ ಹಿನ್ನೆಲೆಯಲ್ಲಿ ಆಕೆ ನೇಣಿಗೆ ಶರಣಾಗಿದ್ದು ಮನೆಯವರು ಮನವಲಿಸಿದರು ಕೂಡ ಆಕೆ ಕೇಳಲಿಲ್ಲ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ನೋಡಿ ಫ್ಯಾನಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಕಬ್ಬರಿಪೇಟೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಘಟನಾ ಸ್ಥಳಕ್ಕೆ ಹೊಸದುರ್ಗ ಪೊಲೀಸರು ಬಂದಿದ್ದು ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.